newsics.com | ನ್ಯೂಸಿಕ್ಸ್
ಹೈದರಾಬಾದ್: ತೆಲುಗಿನ ಜನಪ್ರಿಯ ಸ್ಟಾರ್ ನಟ ರಾಮ್ ಚರಣ್ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಸುದ್ದಿ ಸಿನಿವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳಲ್ಲಿ ಕಳವಳ ಮೂಡಿಸಿದೆ.
ಕಳೆದ ಕೆಲವು ದಿನಗಳಿಂದ ತೀವ್ರವಾದ ತೋಳು ಹಾಗೂ ಭುಜದ ನೋವಿನಿಂದ ಬಳಲುತ್ತಿರುವ ನಟ ರಾಮ್ ಚರಣ್ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಕಡ್ಡಾಯ ಸಲಹೆ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ. ‘ಪೆದ್ದಿ’ ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗವಹಿಸುವಾಗ ಉಂಟಾದ ಗಾಯವೇ ಈ ನೋವಿಗೆ ಕಾರಣ ಎನ್ನಲಾಗಿದೆ. ಈ ಹಿಂದೆ ಇದೇ ಚಿತ್ರದ ಪ್ರಚಾರದ ಸಂದರ್ಭದಲ್ಲೂ ರಾಮ್ ಚರಣ್ ತಮ್ಮ ಕೈಗೆ ಪ್ಲಾಸ್ಟರ್ ಹಾಕಿಕೊಂಡೇ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.
ಇತ್ತೀಚೆಗಷ್ಟೇ ಪವನ್ ಕಲ್ಯಾಣ್ ಮುಂಬೈನ ಧೀರೂಬಾಯಿ ಅಂಬಾನಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೆಗಾ ಕುಟುಂಬದ ಮತ್ತೊಬ್ಬ ಪ್ರಮುಖ ನಟರಾದ ರಾಮ್ ಚರಣ್ ಕೂಡ ಆಪರೇಷನ್ಗೆ ಒಳಗಾಗುತ್ತಿರುವುದು ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಆತಂಕ ಉಂಟುಮಾಡಿದೆ.