newsics.com | ನ್ಯೂಸಿಕ್ಸ್
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಆಗಸ್ಟ್‌ನಲ್ಲಿ ತೆರೆಕಾಣಲು ಸಜ್ಜಾಗಿದ್ದು, ಈಗಾಗಲೇ ಚಿತ್ರದ ಪ್ರಚಾರ ಕಾರ್ಯಗಳು ಜೋರಾಗಿ ನಡೆಯುತ್ತಿವೆ. ಈ ನಡುವೆ ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ಸಿನಿವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದೆ.
ನಿರ್ದೇಶಕಿ ಗೀತು ಮೋಹನದಾಸ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಈಗಾಗಲೇ ಬಿಡುಗಡೆಯಾಗಿರುವ ಎರಡು ಹಾಡುಗಳು, ಟೀಸರ್ ಹಾಗೂ ಪಾತ್ರಗಳ ಪರಿಚಯದ ಪೋಸ್ಟರ್‌ಗಳು ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿದ್ದವು. ಇದೀಗ ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್‌ನಲ್ಲಿ ರಕ್ತಸಿಕ್ತ ಬೆರಳುಗಳ ಮಧ್ಯೆ ಸಿಗರೇಟ್ ಹಿಡಿದುಕೊಂಡು ಕಾಣಿಸಿಕೊಂಡಿರುವ ಯಶ್ ಅವರ ಲುಕ್ ಅತ್ಯಂತ ಮಾಸ್ ಆಗಿದ್ದು, ಇದು ಚಿತ್ರದ ಪ್ರಮುಖ ಪಾತ್ರವಾದ ‘ರಾಯ’ನ ಲುಕ್ ಇರಬಹುದು ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ.
ಆಗಸ್ಟ್ ಕೊನೆಯ ವಾರದಲ್ಲಿ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಸಿನಿಮಾದ ಕುರಿತು ಪ್ರೇಕ್ಷಕರಲ್ಲಿ ನಿರೀಕ್ಷೆ ಮುಗಿಲುಮುಟ್ಟಿದೆ. ತೆರೆಕಾಣುವುದಕ್ಕೂ ಮುನ್ನ ಚಿತ್ರದ ಮತ್ತೆರಡು ಹೊಸ ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಇದರೊಂದಿಗೆ ಆಗಸ್ಟ್ 14ರಂದು ಬೆಂಗಳೂರಿನಲ್ಲಿ ಅತಿ ದೊಡ್ಡ ಮೆಗಾ ಇವೆಂಟ್ ಅನ್ನು ಆಯೋಜಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ.
Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು