Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!
ದೇಶಪ್ರಮುಖ

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

Share
2 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ಪೊಲೀಸರಿಂದ ಬಂಧನಕ್ಕೊಳಗಾದ ಹಾಗೂ ಎಫ್‌ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸ್ಥಾಪಿಸಿರುವ ‘ಕಾನೂನು ನೆರವು ನಿಧಿ’ಗೆ ಬರೋಬ್ಬರಿ ₹1 ಕೋಟಿ ದೇಣಿಗೆ ಘೋಷಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಜುಲೈ 25 ರಂದು ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂಪಡೆದಿತ್ತು. ಇದರ ಬೆನ್ನಲ್ಲೇ ಸರ್ಕಾರದೊಂದಿಗೆ ನಡೆಸಿದ ಮಾತುಕತೆಯ ವೇಳೆ, ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ನಾಯಕರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಮತ್ತು ಅವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ಆಗ್ರಹಿಸಿರುವುದಾಗಿ ಸಿಜೆಪಿ ವಕ್ತಾರರು ಸ್ಪಷ್ಟಪಡಿಸಿದ್ದರು.

ಸೌರವ್ ದಾಸ್ ಕಳವಳ

ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, “ಕೇಂದ್ರ ಸರ್ಕಾರವು ಭರವಸೆ ನೀಡಿದ್ದರೂ ಸಹ, ದೇಶಾದ್ಯಂತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ತೀವ್ರ ಭೀತಿ ಎದುರಾಗಿದೆ,” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತೊಂದರೆಗೆ ಸಿಲುಕಿರುವ ಸಂತ್ರಸ್ತ ವಿದ್ಯಾರ್ಥಿಗಳಿಗೆ ತಕ್ಷಣವೇ ಕಾನೂನು ನೆರವು ಒದಗಿಸುವ ನಿಟ್ಟಿನಲ್ಲಿ ತಾವು ಹಿರಿಯ ವಕೀಲ ಕಪಿಲ್ ಸಿಬಲ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ದಾಸ್ ತಿಳಿಸಿದ್ದಾರೆ.

ಸಿಜೆಪಿ ಮನವಿಗೆ ಧನಾತ್ಮಕವಾಗಿ ಸ್ಪಂದಿಸಿರುವ ಹಿರಿಯ ವಕೀಲ ಕಪಿಲ್ ಸಿಬಲ್, ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಕಾನೂನು ನೆರವು ನೀಡಲು ಒಪ್ಪಿಕೊಂಡಿದ್ದಾರೆ. ಎಫ್‌ಐಆರ್‌ಗಳಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳ ಸಂಪೂರ್ಣ ವಿವರಗಳನ್ನು ಒಳಗೊಂಡ ವಿಶೇಷ ವೆಬ್‌ಸೈಟ್‌ ಒಂದನ್ನು ಸಿಜೆಪಿ ಶೀಘ್ರದಲ್ಲೇ ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಈ ವೆಬ್‌ಸೈಟ್ ಮೂಲಕ ದೇಶದ ಯಾವುದೇ ಭಾಗದ ವಕೀಲರು ಉಚಿತವಾಗಿ ಅಥವಾ ಸೇವಾ ಮನೋಭಾವದಿಂದ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು ನೋಂದಾಯಿಸಿಕೊಳ್ಳಬಹುದು.

‘ಬಿಹಾರ, ಅಸ್ಸಾಂ, ಬಂಗಾಳ ಅಥವಾ ಮಹಾರಾಷ್ಟ್ರ ಸೇರಿದಂತೆ ಭಾರತದ ಯಾವುದೇ ಭಾಗದಲ್ಲಿ ಶಾಂತಿಯುತ ಪ್ರತಿಭಟನೆಗಳು ನಡೆದಿದ್ದು, ಅಲ್ಲಿನ ಸರ್ಕಾರಗಳು ವಿದ್ಯಾರ್ಥಿಗಳು ಅಥವಾ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡಿದ್ದರೆ, ಅವರ ವಿರುದ್ಧದ ಕಾನೂನು ಪ್ರಕರಣಗಳನ್ನು ಟ್ರ್ಯಾಕ್ ಮಾಡಲು ನಾವು ವಿಶೇಷ ವ್ಯವಸ್ಥೆಯನ್ನು ರೂಪಿಸಿದ್ದೇವೆ. ನಮ್ಮ ವಕೀಲರ ತಂಡ ಅವರಿಗೆ ಕಾನೂನು ನೆರವು ನೀಡಲಿದೆ. ವಿದ್ಯಾರ್ಥಿಗಳ ಮೇಲೆ ಯಾವುದೇ ಎಫ್‌ಐಆರ್ ಇರಬಾರದು, ಒಂದು ವೇಳೆ ದಾಖಲಾಗಿದ್ದರೆ ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ನಾವು ಆಗ್ರಹಿಸುತ್ತೇವೆ’ ಎಂದು ಕಪಿಲ್‌ ಸಿಬಲ್‌ ಹೇಳಿದ್ದಾರೆ.

ನನ್ನ ವೈಯಕ್ತಿಕ ಕಡೆಯಿಂದ ನಾನು ಈ ನಿಧಿಗೆ ₹1 ಕೋಟಿ ದೇಣಿಗೆ ನೀಡಿದ್ದೇನೆ. ಸಂಕಷ್ಟದಲ್ಲಿರುವ ಯುವಕರಿಗೆ ನೆರವಾಗಲು ದೇಶಾದ್ಯಂತ ಇರುವ ಎಲ್ಲಾ ವಕೀಲರು ಈ ನಿಧಿಗೆ ತಮ್ಮ ಕೈಲಾದಷ್ಟು ದೇಣಿಗೆ ನೀಡುವಂತೆ ಮನವಿ ಮಾಡುತ್ತೇನೆ. ಕಾನೂನಿನ ದುರುಪಯೋಗದಿಂದ ತೊಂದರೆ ಅನುಭವಿಸುತ್ತಿರುವವರ ಪರವಾಗಿ ನಮ್ಮ ವಕೀಲರು ಗಟ್ಟಿಯಾಗಿ ನಿಲ್ಲಲಿದ್ದಾರೆ,” ಎಂದು ಸಿಬಲ್ ಹೇಳಿದ್ದಾರೆ. ಇದೇ ವೇಳೆ, ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ವಿರುದ್ಧ ಸರ್ಕಾರಗಳು ಯಾವುದೇ ರೀತಿಯ ಪೋಲಿಸ್ ಅಥವಾ ಕಾನೂನು ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸಿಬಲ್ ಮನವಿ ಮಾಡಿದ್ದಾರೆ.

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

 

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

 

TAGGED:Kapil Sibal donates Rs 1 crore to CJP's legal aid fund!
Share This Article
Facebook Twitter Copy Link Print
Previous Article Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?