newsics.com | ನ್ಯೂಸಿಕ್ಸ್
ಲಕ್ನೋ: ಉತ್ತರ ಪ್ರದೇಶದ ಮಾಜಿ ರಾಜ್ಯ ಸಚಿವ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ಪ್ರಮುಖ ನಾಯಕ ನಾನಕ್ ರಾಮ್ ಭೂರ್ಜಿ (55) ಅವರು ಲಖನೌದಲ್ಲಿರುವ ಶಾಸಕರ ನಿವಾಸದ ಏಳನೇ ಮಹಡಿಯಿಂದ ಕೆಳಗೆ ಬಿದ್ದು ಇಂದು ಮೃತಪಟ್ಟಿದ್ದಾರೆ.
ನಗರದ ಹಝರತ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ದಾರುಲ್ ಸಫಾ ನೂತನ ಶಾಸಕರ ಭವನದ ಹಿಂಭಾಗದಲ್ಲಿ ಈ ಅನಾಹುತ ಸಂಭವಿಸಿದೆ. ಎಸ್ಟೇಟ್ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ತಲುಪಿದರು. ತೀವ್ರವಾಗಿ ಪೆಟ್ಟುಕೊಂಡಿದ್ದ ನಾನಕ್ ರಾಮ್ ಭೂರ್ಜಿ ಅವರನ್ನು ತುರ್ತಾಗಿ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.
ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಕಾಲುಜಾರಿ ಆಕಸ್ಮಿಕವಾಗಿ ಬಿದ್ದಿದ್ದಾರೋ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ