newsics.com
ಕೋಲಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಪ್ಪು ಪಟ್ಟೆ ಪ್ರದರ್ಶನ ಮಾಡುವುದಾಗಿ ಅಹಿಂದ ಒಕ್ಕೂಟದ ನಾಯಕರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ನಾಳೆಯ ಕೋಲಾರ ಪ್ರವಾಸ ರದ್ದು ಮಾಡಲಾಗಿದೆ. ಈ ಬಗ್ಗೆ ಟಿವಿ9ಗೆ ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ನಾಳೆ ಕೋಲಾರದಲ್ಲಿ ನಡೆಯಲಿರುವ ಬೆಂಗಳೂರು ಉತ್ತರ ವಿವಿ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಪ್ರವಾಸ ರದ್ದು ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅಹಿಂದ ಒಕ್ಕೂಟದ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಯಾವುದೇ ರೀತಿಯ ಹಗರಣವಾಗಲಿ, ಕಪ್ಪುಚುಕ್ಕೆಯಾಗಲಿ ಇಲ್ಲ. ಆದರೆ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ಮೂಡಾ ಹಗರಣದಲ್ಲಿ ಸಿಲುಕಿಸಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಖಂಡನೀಯ. ನಾಳೆ ಕೋಲಾರದ ಹೊರವಲಯದ ನಂದಿನಿ ಪ್ಯಾಲೇಸ್ನಲ್ಲಿ ನಡೆಯಲಿರುವ ಬೆಂಗಳೂರು ವಿವಿಯ 4ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಪಾಲರು ಆಗಮಿಸುತ್ತಿದ್ದು, ಇದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತಿರುವುದಾಗಿ ತಿಳಿಸಿದ್ದಾರೆ.