newsics.com
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಕೇವಲ 8 ದಿನಗಳಲ್ಲಿ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳಸಾಗಣೆ ಮಾಡಲು ಯತ್ನಿಸಿದ 31 ಪ್ರಯಾಣಿಕರಿಂದ ಸಿಗರೇಟ್ ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಆಗಸ್ಟ್ 23 ಮತ್ತು 30 ರ ನಡುವೆ, ಥಾಯ್ಲೆಂಡ್, ಮಲೇಷ್ಯಾ, ಸಿಂಗಾಪುರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಬೆಂಗಳೂರಿಗೆ ಆಗಮಿಸಿದ ಸುಮಾರು 31 ಪ್ರಯಾಣಿಕರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಯಾಣಿಕರ ರೂಪದಲ್ಲಿ ವಿದೇಶದಿಂದ ಭಾರೀ ಬೆಲೆ ಬಾಳುವ ವಸ್ತುಗಳನ್ನು ಈ ಆರೋಪಿಗಳು ಕದ್ದುಮುಚ್ಚಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು ಪ್ರಯಾಣಿಕರ ವಿವರ, ಸುಳಿವು ಮತ್ತು ಇತರ ಆಧಾರದ ಮೇಲೆ ಅವರನ್ನು ತಡೆಹಿಡಿಯಲಾತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ ಅಕ್ರಮ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.