newsics.com
ಬೆಂಗಳೂರು: ಎರಡು ತಿಂಗಳ ಒಳಗಾಗಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, “ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.” ಎಂದು ತಿಳಿಸಿದ್ದಾರೆ.