newsics.com
ಫಿರೋಜ್ಪುರ: ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ದುಷ್ಕರ್ಮಿಗಳು ದೊಡ್ಡ ಗುಂಡಿನ ದಾಳಿ ನಡೆಸಿದ್ದಾರೆ. ಹಾಡಹಗಲೇ ದುಷ್ಕರ್ಮಿಗಳು ಮೂವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಕೊಲೆಯ ಘಟನೆ ಗುರುದ್ವಾರ ಅಕಲಗಢ ಸಾಹಿಬ್ ಬಳಿ ನಡೆದಿದೆ. ಗುರುದ್ವಾರದ ಬಳಿ ದುಷ್ಕರ್ಮಿಗಳು ಮನಬಂದಂತೆ ಗುಂಡು ಹಾರಿಸಿ ಮೂವರನ್ನು ಕೊಂದಿದ್ದಾರೆ. ಮೃತರಲ್ಲಿ ಓರ್ವ ಬಾಲಕಿಯೂ ಸೇರಿದ್ದಾಳೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.
ಮೃತರಾದ ಮೂವರೂ ಒಂದೇ ಕುಟುಂಬದವರು
ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.