Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ಕಿರುಕುಳ: ಸ್ಯಾಂಡಲ್‌ವುಡ್‌ನಲ್ಲೂ ಸಮಿತಿ ರಚನೆಗೆ ಸುದೀಪ್ ಸೇರಿ 153 ನಟ-ನಟಿಯರ ಒತ್ತಾಯ, ಸರ್ಕಾರಕ್ಕೆ ಪತ್ರ
ಕರ್ನಾಟಕಪ್ರಮುಖಮನರಂಜನೆ

ಲೈಂಗಿಕ ಕಿರುಕುಳ: ಸ್ಯಾಂಡಲ್‌ವುಡ್‌ನಲ್ಲೂ ಸಮಿತಿ ರಚನೆಗೆ ಸುದೀಪ್ ಸೇರಿ 153 ನಟ-ನಟಿಯರ ಒತ್ತಾಯ, ಸರ್ಕಾರಕ್ಕೆ ಪತ್ರ

Share
2 Min Read
SHARE

newsics.com

ಬೆಂಗಳೂರು: ಮಲಯಾಳಂ ಸಿನಿರಂಗದಲ್ಲಿ ಸಾಲು ಸಾಲು ಲೈಂಗಿಕ ಹಗರಣ ಆರೋಪ ಕೇಳಿ ಬರುತ್ತಿದೆ. ಇದರ ನಡುವೆಯೇ ಎಲ್ಲಾ ಚಿತ್ರರಂಗಗಳೂ ಎಚ್ಚೆತ್ತುಕೊಂಡು ಕಮಿಟಿ ರಚನೆ ಮಾಡಬೇಕು ಎಂದು ಪಟ್ಟು ಹಿಡಿದಿವೆ.

ಕೆಲ ದಿನಗಳ ಹಿಂದಷ್ಟೇ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದ ತೆಲುಗಿನ ನಟಿ ಸಮಂತಾ ತೆಲುಗು ಚಿತ್ರರಂಗದಲ್ಲೂ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ಹಾಗೂ ಇತರೆ ಸಮಸ್ಯೆಗಳನ್ನು ಅಧ್ಯಯನ ಆಗಬೇಕೆಂದು ಒತ್ತಾಯಿಸಿದ್ದರು. ಇದಕ್ಕೆ ಹಲವರು ದನಿಗೂಡಿಸಿದ್ದರು.

ಕನ್ನಡ ಚಿತ್ರರಂಗದ ಹಲವು ನಟಿಯರು ಕನ್ನಡದಲ್ಲೂ ಇದೇ ರೀತಿಯ ಕಮಿಟಿ ರಚಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರ ಬರೆದಿದ್ದು, ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ನೇತೃತ್ವದಲ್ಲಿ 153 ಮಂದಿ ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಸ್ಯಾಂಡಲ್‌ವುಡ್‌‌ನಲ್ಲಿ ಮೀ ಟೂ ಅಭಿಯಾನವಾದಾಗ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳೆಯರ ಸಮಸ್ಯೆಗಳಿಗಾಗಿ 2017ರಲ್ಲಿ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ರಚಿಸಲಾಗಿತ್ತು. ಇದರಲ್ಲಿ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಸೇರಿ ಹಲವರು ಇದ್ದಾರೆ.

ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಒತ್ತಾಯಿಸಿದೆ.

ಕನ್ನಡ ಚಲನಚಿತ್ರೋದ್ಯಮದ ಮತ್ತು ವಿವಿಧ ಕ್ಷೇತ್ರಗಳ 153 ವ್ಯಕ್ತಿಗಳು ಈ ಅರ್ಜಿಗೆ ಸಹಿ ಹಾಕಿದ್ದಾರೆ. FIRE ಅಧ್ಯಕ್ಷೆ ನಿರ್ದೇಶಕಿ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟಿಯರಾದ ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧಾ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ಸಂಗೀತಾ ಭಟ್ , ನೀತು ಶೆಟ್ಟಿ ವಿನಯ್ ರಾಜ್‌ಕುಮಾರ್, ನಟ ಸುದೀಪ್‌, ನಿರ್ದೇಶಕ ಪವನ್ ಒಡೆಯರ್‌ ಸೇರಿದಂತೆ ಕಿರುತೆರೆ ನಟ ನಟಿಯರು ಸೇರಿ ಒಟ್ಟು 153 ಮಂದಿ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

2018ರಲ್ಲಿ ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತಾದ್ಯಾಂತ ಚಿತ್ರ ರಂಗದಲ್ಲಿ MeToo ಅಭಿಯಾನ ದೊಡ್ಡ ಮಟ್ಟದಲ್ಲಿ ಸುದ್ದಿಯಾಯ್ತು. ಬಾಲಿವುಡ್ ನಲ್ಲಿ ನಟಿ ತನುಶ್ರೀ ದತ್ತ ಮಾಡಿದ ಆರೋಪ ಅಂದು ಅಭಿಯಾನಕ್ಕೆ ನಾಂದಿ ಹಾಡಿತು.

ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ. ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ, ಅನೇಕ ದಿಗ್ಗಜ ನಟರ ಹೆಸರು ಬೆಳಕಿಗೆ ಬರುತ್ತಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರವೇನು? 

ಗಂಡನಿಗೆ ಬೇರೆ ಹೆಣ್ಣಿನೊಂದಿಗೆ ಸಂಬಂಧವಿದ್ಯಾ? ಹೀಗೆ ಪತ್ತೆ ಹಚ್ಚಿ!

TAGGED:Harassment: 153 actors and actresses to form committee in Sandalwood tooletter to Govt.
Share This Article
Facebook Twitter Copy Link Print
Previous Article 6 ವರ್ಷಗಳ ಬಳಿಕ ಮೊದಲ ಬಾರಿಗೆ ಸಿಂಗಾಪುರಕ್ಕೆ ತೆರಳಿದ ಮೋದಿ
Next Article ಹೆಂಡತಿಗೆ ಜೈಲಿಂದ ದರ್ಶನ್ ಪೋನ್ ಕಾಲ್! 10 ನಿಮಿಷ ಮಾತನಾಡಿದ್ದೇನು?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?