newsics.com
ವಿಜಯಪುರ: ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ ಸವಾರರೂ ಸೇರಿ ನಾಲ್ವರು ಬಲಿಯಾಗಿರುವ ಭಯಾನಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
ಗುರುವಾರ ಮಧ್ಯರಾತ್ರಿ ಕುಂಟೋಜಿ ಗ್ರಾಮದ ಹತ್ತಿರ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವ ಬಾಗಲಕೋಟೆ ಜಿಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ಮೃತನಾಗಿದ್ದಾನೆ. ಮೃತರೆಲ್ಲರೂ ಮಲಗಲದಿನ್ನಿ ಗ್ರಾಮದ ಯುವಕರು ಎಂದು ಹೇಳಲಾಗಿದೆ.
ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಯ ಅಂಗವಾಗಿ ವಿವಿಧ ಶಕ್ತಿ ಪ್ರದರ್ಶನದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಜತೆಗೆ ರಾತ್ರಿ ನಾಟಕ ಪ್ರದರ್ಶನವೂ ನಡೆಯುತ್ತಿತ್ತು. ನಾಟಕ ನೋಡಲು ಸುತ್ತಲಿನ ಹಳ್ಳಿಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇವರಲ್ಲಿ ಕೆಲವು ಯುವಕರು ರಸ್ತೆ ಪಕ್ಕ ಮೂತ್ರ ವಿಸರ್ಜಿಸುತ್ತಿದ್ದಾಗ ವ್ಹೀಲಿಂಗ್ ಬೈಕ್ ಇವರೆಲ್ಲರಿಗೂ ಗುದ್ದಿದೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಲ್ಲಿ ಇಬ್ಬರನ್ನು ಮಲಗಲದಿನ್ನಿಯ ರಾಯಪ್ಪ ಬಾಗೇವಾಡಿ, ಹಣಮಂತ್ರಾಯ ಕುರುಬಗೌಡ್ರ, ಲಿಂಗರಾಜ್ ಚೌಧರಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತನ ಹೆಸರು ತಿಳಿದುಬಂದಿಲ್ಲ.
ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ ಕೊಟ್ಟ ಖಡಕ್ ಸೂಚನೆ ಏನು?
ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?