newsics.com
ಬೆಂಗಳೂರು : ಮಾಗಡಿರೋಡ್‌ನ ದಾಸರಹಳ್ಳಿಯ ಬಿ.ಆರ್.ಐ ಕಾಲೋನಿಯಲ್ಲಿ ಗಣೇಶನಿಗಾಗಿ ಸುಮಾರು 65 ಗ್ರಾಂ ಚಿನ್ನದ ಸರ ಹಾಕಿ ಪೂಜೆ ಮಾಡಿದ್ದರು. ಸಂಜೆ ವಿರ್ಸಜನೆ ವೇಳೆ ಚಿನ್ನದ ಸರದ ಸಮೇತ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ.
ಗಣೇಶ ವಿಸರ್ಜನೆಗಾಗಿ ಬಿಬಿಎಂಪಿಯಿಂದ ಟ್ರಕ್ ನೀರಿನ ವ್ಯವಸ್ಥೆ ಮಾಡಲಾಗಿತ್ತು.
ನಿನ್ನೆ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಹೋಗಿ ಚಿನ್ನದ ಸರದ ಸಮೇತ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ.
ಟ್ರಕ್‌ನಲ್ಲಿದ್ದ ನೀರನ್ನು ಖಾಲಿ ಮಾಡಿ, ಗಣೇಶ ಮೂರ್ತಿ ಕರಗಿದ್ದ ಮಣ್ಣಲ್ಲಿ ಚಿನ್ನದ ಸರಕ್ಕೆ ಹುಡುಕಾಟ ನಡೆಸಿದ್ದಾರೆ. ರಾತ್ರಿಯೆಲ್ಲ ಹುಡುಕಾಡಿದ ಬಳಿಕ ಬೆಳಗಿನ ಜಾವ 65 ಗ್ರಾಂ ಚಿನ್ನದ ಸರ ಸಿಕ್ಕಿದೆ.