newsics.com
ಪಾಟ್ನಾ: ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದಲ್ಲಿ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಪಾಟ್ನಾ ನಗರದ ಮಂಗಲ್ ತಲಾಬ್ ಬಳಿಯ ಮನೋಜ್ ಕಮಾಲಿಯಾ ಗೇಟ್ ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಮುಖಂಡ ಶ್ಯಾಮ್ ಸುಂದರ್ ಅಲಿಯಾಸ್ ಮುನ್ನಾ ಶರ್ಮಾ ಎಂದು ಗುರುತಿಸಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಶ್ಯಾಮ್ ಸುಂದರ್ ಮನೋಜ್ ಕಮಾಲಿಯಾ ಗೇಟ್ ಬಳಿ ಬಂದಿದ್ದಾಗ ಕ್ರಿಮಿನಲ್‌ಗಳು ಗುಂಡು ಹಾರಿಸಿದ್ದಾರೆ. ಶ್ಯಾಮ್ ಸುಂದರ್ ಬಿಜೆಪಿಯಿಂದ ಪಾಟ್ನಾ ಸಿಟಿ ಚೌಕ್‌ನ ಮಾಜಿ ಮುನ್ಸಿಪಲ್ ಬೋರ್ಡ್ ಅಧ್ಯಕ್ಷರಾಗಿದ್ದರು.
ದೇವಸ್ಥಾನದಿಂದ ಹೊರಗೆ ಬಂದು ಯಾರೊಂದಿಗೋ ಮಾತನಾಡುತ್ತಿದ್ದರು, ಅಷ್ಟರಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಅವರ ಕತ್ತಿನಲ್ಲಿದ್ದ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಮೊಬೈಲ್ ಕಿತ್ತುಕೊಂಡು ತಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.
ಟೀಚರ್ ಬೈದಿದ್ದಕ್ಕೆ ಶಾಲೆ ಬಿಟ್ಟು 40 ಕಿ.ಮೀ ಓಡಿ ಹೋದ ವಿದ್ಯಾರ್ಥಿಗಳು