newsics.com
ಬಿಗ್‌ಬಾಸ್ ಹಾಗೂ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ ಖ್ಯಾತಿಯ ನಿವೇದಿತಾ ಗೌಡ ದಿನದಿಂದ ದಿನಕ್ಕೆ ಸಖತ್ ಆಗಿ ಮಿಂಚಿದ್ದರು. ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಗೌಡ ರೀಲ್ಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಲೇ ಇರುತ್ತದೆ. ಚಂದನ್ ಶೆಟ್ಟಿಗೆ ಡಿವೋರ್ಸ್ ನೀಡಿದ ಬಳಿಕವೂ ಹಾಟ್ ಬ್ಯೂಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿರುತ್ತಾರೆ.
ಬಿಗ್ ಬಾಸ್, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡು ಆಗಾಗ ನಿವೇದಿತಾ ಗೌಡ ಸುದ್ದಿಯಲ್ಲಿ ಇರುತ್ತಿದ್ದರು. ಅದರಲ್ಲೂ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಸ್ ಹಾಗೂ ವಿಡಿಯೋಸ್ ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ. ಗಾಯಕ ಚಂದನ್ ಶೆಟ್ಟಿಗೆ ಡಿವೋರ್ಸ್ ಕೊಟ್ಟ ಬಳಿಕವಂತೂ ಸಾಕಷ್ಟು ಸದ್ದು ಮಾಡುತ್ತಿದ್ದ ನಿವೇದಿತಾ ಅವರು ಇದೀಗ ಹೊರ ಹಾಟ್ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.