newsics.com
ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್ನಲ್ಲಿ ನಡೆಸಲಾಗಿದೆ. ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಏನು ತೀರ್ಪು ಬರುತ್ತೆ ಎಂದು ಟೆನ್ಷನ್ ಶುರುವಾಗಿದೆ.
ರಾಜ್ಯಪಾಲರು ಅತಿ ವಿರಳ ಸಂದರ್ಭದಲ್ಲಿ ಮಾತ್ರ ವಿವೇಚನಾಧಿಕಾರ ಬಳಸಬೇಕು. ರಾಜ್ಯಪಾಲರು ಜನರಿಂದ ಆಯ್ಕೆಯಾಗಿಲ್ಲ, ನೇಮಕಗೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರಿಗೆ ಹೆಚ್ಚಿನ ಉತ್ತರದಾಯಿತ್ವ ಇದೆ ಎಂದು ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ತೀರ್ಪು ಉಲ್ಲೇಖಿಸಿದರು.