newsics.com
ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.
ಜಾಮೀನು ನೀಡಿರುವ ಸುಪ್ರೀಂಕೋರ್ಟ್ ಕೇಜ್ರಿವಾಲ್‌ಗೆ ಕೆಲವು ಷರತ್ತುಗಳನ್ನು ವಿಧಿಸಿದೆ. 10 ಲಕ್ಷ ರೂ.ಗಳ ಜಾಮೀನು ಬಾಂಡ್ ನೀಡಬೇಕು.
ದೆಹಲಿ ಮದ್ಯ ನೀತಿ ಪ್ರಕರಣದ ಬಗ್ಗೆ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಬಾರದು.
ತನಿಖಾಧಿಕಾರಿಗಳು ಕರೆದಾಗ ದೆಹಲಿ ಮುಖ್ಯಮಂತ್ರಿ ವಿಚಾರಣೆಗೆ ಹಾಜರಾಗಬೇಕಾಗುತ್ತದೆ.
ಜಾಮೀನಿನ ಮೇಲೆ ಹೊರಗಿರುವಾಗ ಕೇಜ್ರಿವಾಲ್ ಮುಖ್ಯಮಂತ್ರಿ ಕಚೇರಿ ಅಥವಾ ದೆಹಲಿ ಸಚಿವಾಲಯವನ್ನು ಪ್ರವೇಶಿಸುವಂತಿಲ್ಲ.
ಅವರು ಅಧಿಕೃತ ಫೈಲ್ ಗಳಿಗೆ ಸಹಿ ಮಾಡಲು ಸಾಧ್ಯವಿಲ್ಲ.
ಜೈಲಿನಲ್ಲಿ ಕೇಜ್ರಿವಾಲ್ ಒಟ್ಟು 177 ದಿನಗಳಿದ್ದು, ಅದರಲ್ಲಿ 21 ದಿನಗಳನ್ನು ಕಳೆದರೆ ಕೇಜ್ರಿವಾಲ್ ಒಟ್ಟು 156 ದಿನಗಳ ಕಾಲ ಜೈಲಿನಲ್ಲಿದ್ದರು.
ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. 10 ದಿನಗಳ ವಿಚಾರಣೆಯ ನಂತರ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು
ಜಾಮೀನಿಗಾಗಿ ಕೇಜ್ರಿವಾಲ್ ಅವರು ನೇರವಾಗಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ರದ್ದಾದ ದೆಹಲಿ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಸಿಎಂ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಜೂನ್ 26 ರಂದು ಅಬಕಾರಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾಗ ಸಿಬಿಐ ಅವರನ್ನು ಬಂಧಿಸಿತ್ತು.
ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ 100 ಕೋಟಿಗಳಷ್ಟು ಕಿಕ್‌ಬ್ಯಾಕ್ ಪಡೆದಿದೆ. ಈ ಹಣದ ದೊಡ್ಡ ಭಾಗವನ್ನು ಪಕ್ಷವು ತನ್ನ ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ ಎಂದು ಆರೋಪಿಸಲಾಗಿದೆ.
ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್