newsics.com
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿದೆ.
ಮೂರು ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ.
ಈ ಮೂಲಕ ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ.
ಇದೇ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಅನುಷ್ಠಾನಗೊಳಿಸಲು ಮಂಡಳಿ ಸಜ್ಜಾಗಿದ್ದು, ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ.
ಆದರೆ, ಪರೀಕ್ಷೆಯ ಅವಧಿ ಕಡಿತವಾದರೂ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ನಲ್ಲಿ ಮೂರು ಗಂಟೆ ಇರಲೇಬೇಕಾಗುತ್ತದೆ. ಪರೀಕ್ಷೆಯ ಆರಂಭದ 15 ನಿಮಿಷವನ್ನು ಪ್ರಶ್ನೆಗಳನ್ನು ಓದಿಕೊಳ್ಳಲು ಬಳಸಲು ಅವಕಾಶ ನೀಡಲಾಗುತ್ತದೆ. ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ 100 ಅಂಕದ ಬದಲು 80 ಅಂಕಕ್ಕೆ ಪರೀಕ್ಷೆ ಬರೆಯುವಂತೆ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್