Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಬನ್ನಂಜೆ ಸಂಜೀವ ಸುವರ್ಣಗೆ ಪಾರ್ತಿ ಸುಬ್ಬ ಪುರಸ್ಕಾರ
ಕರ್ನಾಟಕಪ್ರಮುಖಮನರಂಜನೆ

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಬನ್ನಂಜೆ ಸಂಜೀವ ಸುವರ್ಣಗೆ ಪಾರ್ತಿ ಸುಬ್ಬ ಪುರಸ್ಕಾರ

Share
2 Min Read
SHARE

newsics.com

ಉಡುಪಿ: 2023ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಈ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಶನಿವಾರ ಉಡುಪಿಯಲ್ಲಿ ಈ ಮಾಹಿತಿ ನೀಡಿದರು.

ನವೆಂಬರ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ ಎಂದು ಶಿವರಾಮ ಶೆಟ್ಟಿ ತಿಳಿಸಿದರು.

2023ನೇ ಸಾಲಿನ ಗೌರವ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ, ಮೂಡಲಪಾಯ ಯಕ್ಷಗಾನ ಭಾಗವತ ನಾರಾಯಣಪ್ಪ ಎಆರ್, ಅರ್ಥಧಾರಿ ಜಬ್ಬಾರ್ ಸಮೋ, ತೆಂಕು ಹಾಗೂ ಬಡಗಿನ ಪ್ರಸಿದ್ಧ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ತೆಂಕುತಿಟ್ಟಿನ ವೇಷಧಾರಿ ಚೆನ್ನಪ್ಪ ಗೌಡ ಸಜೀಪ ಅವರು ಆಯ್ಕೆಯಾಗಿದ್ದಾರೆ.

2023ನೇ ಸಾಲಿನ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಹಿರಿಯ ವೇಷಧಾರಿ ರಘುನಾಥ ಶೆಟ್ಟಿ ಬಾಯಾರು, ಪ್ರಸಾದನ ಕಲಾವಿದ ಹಾಗೂ ವೇಷಧಾರಿ ದಿವಾಕರ ದಾಸ ಕಾವಳಕಟ್ಟೆ, ಬಣ್ಣದ ವೇಷಧಾರಿ ಸುಬ್ರಾಯ ಪಾಟಾಳಿ ಸಂಪಾಜೆ, ಬಡಗುತಿಟ್ಟಿನ ವೇಷಧಾರಿ ನರಾಡಿ ಭೋಜರಾಜ ಶೆಟ್ಟಿ, ಬಡಗುತಿಟ್ಟಿನ ಚೆಂಡೆ ವಾದಕ ಸದಾನಂದ ಪ್ರಭು, ಬಡಗುತಿಟ್ಟಿನ ಹಾಸ್ಯಗಾರ ಹೊಳೆಮಗೆ ನಾಗಪ್ಪ ಮರಕಾಲ, ಬಡಗುತಿಟ್ಟಿನ ವೇಷಧಾರಿ ಶಿರಳಗಿ ತಿಮ್ಮಪ್ಪ ಹೆಗಡೆ, ತೆಂಕು – ಬಡಗಿನ ಸ್ತ್ರೀವೇಷಧಾರಿ ಬಾಬು ಕುಲಾಲ್ ಹಳ್ಳಾಡಿ, ಮೂಡಲಪಾಯ ಭಾಗವತ ಶಿವಯ್ಯ, ಮೂಡಲಪಾಯ ಭಾಗವತ ಜೀಯಪ್ಪ ಆಯ್ಕೆಯಾಗಿದ್ದಾರೆ.
ದತ್ತಿನಿದಿ ಪ್ರಶಸ್ತಿ:
2023ನೇ ಸಾಲಿನ ದತ್ತಿನಿದಿ ಪ್ರಶಸ್ತಿಯೂ ಪ್ರಕಟವಾಗಿದ್ದು, ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿಯು ಹೊನ್ನಾವರದ ಭಾಗವತ ಗೋಪಾಲಕೃಷ್ಣ ಶಂಕರ ಭಟ್ ಜೋಗಿಮನೆ ಅವರಿಗೆ ಘೋಷಣೆಯಾಗಿದೆ. 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನವನ್ನು ವಿದ್ವಾನ್ ಗಣಪತಿ ಭಟ್, ಡಾ. ಮನೋರಮಾ ಬಿಎನ್, ಡಾ. ಸತೀಶ್ ಜಿ ನಾಯ್ಕ, ಎಚ್ ಸುಜಯೀಂದ್ರ ಹಂದೆ ಅವರಿಗೆ ಲಭಿಸಿದೆ.

ಗೌರವ ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಯಕ್ಷಸಿರಿ ಪ್ರಶಸ್ತಿ 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ.

ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತ ಎನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಅಕಾಡೆಮಿ ಸದಸ್ಯರಾದ ಸುಧಾಕರ್ ಶೆಟ್ಟಿ ಉಳ್ಳಾಲ್, ವಿದ್ಯಾಧರ ಜಲವಳ್ಳಿ ಉಪಸ್ಥಿತರಿದ್ದರು.

ಹೊಸ ಪ್ರಭೇದದ ಮೂರು ಸಗಣಿ ಜೀರುಂಡೆ ಪತ್ತೆ

TAGGED:Yakshagana Academy Award Announced: Parti Subba Award to Bannanje Sanjiva Suvarna
Share This Article
Facebook Twitter Copy Link Print
Previous Article ಉರ್ಫಿ ಜಾವೇದ್ ಬ್ಯೂಟಿ ಸೀಕ್ರೆಟ್ ರಿವೀಲ್
Next Article ವಯಾಗ್ರ ತಿಂದ್ರೆ ಏನೇನಾಗತ್ತೆ? ಯಾರ‌್ಯಾರು ಇದನ್ನು ಬಳಸಬಾರದು?

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?