Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಂಗಳೂರಿನಿಂದ ಹೊರಟಿದ್ದ ಯುವಕ ನಿಫಾ ವೈರಸ್‌ಗೆ‌ ಬಲಿ, ಎಲ್ಲೆಡೆ ಹೆಚ್ಚಿದ ಆತಂಕ
ದೇಶಪ್ರಮುಖ

ಬೆಂಗಳೂರಿನಿಂದ ಹೊರಟಿದ್ದ ಯುವಕ ನಿಫಾ ವೈರಸ್‌ಗೆ‌ ಬಲಿ, ಎಲ್ಲೆಡೆ ಹೆಚ್ಚಿದ ಆತಂಕ

Share
2 Min Read
SHARE

newsics.com

ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು ಮಾತ್ರವಲ್ಲ, 24ರ ಹರೆಯದ ಯುವಕನೋರ್ವ ಬಲಿಯಾಗಿರವುದು ದೃಢಪಟ್ಟಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಮಾಹಿತಿ ನೀಡಿದ್ದು, ನಿಫಾ ವೈರಸ್‌ನಿಂದ ಯುವಕ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಆದರೆ ಜ್ವರದಿಂದ ಬಳಲುತ್ತಿದ್ದ ಈ ಯುವಕ ಬೆಂಗಳೂರಿನಿಂದ ಕೇರಳದ ಮಲಪ್ಪುರಂಗೆ ತೆರಳಿದ್ದ. ಅಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಇದೀಗ ನಿಫಾ ವೈರಸ್‌ನಿಂದ ಮೃತಪಟ್ಟಿದ್ದಾನೆ.

ನಿಫಾ ವೈರಸ್ ಖಚಿತಗೊಳ್ಳುತ್ತಿದ್ದಂತೆ ಇದೀಗ ಕೇರಳ ಮಾತ್ರವಲ್ಲ ಬೆಂಗಳೂರಿನಲ್ಲೂ ಆತಂಕ ಸೃಷ್ಟಿಯಾಗಿದೆ.

ಕೇರಳದ ಮಲಪ್ಪುರಂ ನಿವಾಸಿಯಾಗಿರುವ ಈ ಯುವಕ ಆರೋಗ್ಯದ ಕಾರಣದಿಂದ ತವರಿಗೆ ಮರಳಿದ್ದ. ಆಸ್ಪತ್ರೆಗೆ ದಾಖಲಾಗಿದ್ದ ಯುವಕನ ಮಾದರಿಗಳನ್ನು ಸಂಗ್ರಹಿಸಿ ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಸೆಪ್ಟೆಂಬರ್ 9 ರಂದು ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಯುವಕನ ಸಾವು ಪ್ರಕರಣ ವೈದ್ಯರ ತಂಡಕ್ಕೆ ಅನುಮಾನ ಮೂಡಿಸಿತ್ತು. ಈ ವೇಳೆ ಮತ್ತೊಮ್ಮೆ ಈತನ ಮಾದರಿ ಸಂಗ್ರಹಿಸಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿತ್ತು.

ಈಗ ಪ್ರಯೋಗಾಲಯದಿಂದ ವರದಿ ಬಂದಿದ್ದು, ಯುವಕನಿಗೆ ನಿಫಾ ವೈರಸ್ ಪಾಸಿಟಿವ್ ಇತ್ತೆಂಬುದು ದೃಢಪಟ್ಟಿದೆ. ಈ ಮಾಹಿತಿ ಬಯಲಾಗುತ್ತಿದ್ದಂತೆ ಕೇರಳದಲ್ಲಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ನಿಫಾ ವೈರಸ್‌ಗೆ ಯುವಕ ಬಲಿಯಾಗಿರುವುದು ಜನರ ಆತಂಕ ಹೆಚ್ಚಿಸಿದೆ.

ನಿಫಾ ವೈರಸ್ ಖಚಿತವಾಗುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ತುರ್ತು ಸಭೆ ಕರೆದು ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ನಿಫಾ ವೈರ್ ಪ್ರಕರಣದ ಕುರಿತು 16 ಸದಸ್ಯರ ಸಮಿತಿ ರಚಿಸಲಾಗಿದೆ.

ಈ ಸಮಿತಿ ಹಾಗೂ ಅಧಿಕಾರಿಗಳು ಯುವಕನ ನೇರ ಸಂಪರ್ಕಿತರನ್ನು ಪತ್ತೆ ಹಚ್ಚಿದೆ. ಬೆಂಗಳೂರಿನಿಂದ ಕೇರಳದವರೆಗೆ 151 ಮಂದಿ ನೇರ ಸಂಪರ್ಕಿತರನ್ನು ಗುರುತಿಸಲಾಗಿದೆ. ಇದೀಗ ಅವರ ಮಾದರಿ ಸಂಗ್ರಹಿಸಲಾಗುತ್ತಿದೆ. ಇಷ್ಟೇ ಅಲ್ಲ ವರದಿ ಬರುವವರೆಗೂ ಎಲ್ಲರನ್ನೂ ಐಸೋಲೇಶನ್ ಮಾಡಲಾಗುತ್ತದೆ ಎಂದು ವೀಣಾ ಜಾರ್ಜ್ ಹೇಳಿದ್ದಾರೆ. ಹಲವರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಈ ಪೈಕಿ ಐವರಲ್ಲಿ ಸಣ್ಣ ಪ್ರಮಾಣದಲ್ಲಿ ಜ್ವರ, ಮೈ ಕೈ ನೋವು, ಶೀತ ಕಾಣಿಸಿಕೊಂಡಿದೆ.

ಈ ವರ್ಷ ಕೇರಳದಲ್ಲಿ ನಿಫಾ ವೈರಸ್‌ಗೆ ಬಲಿಯಾಗುತ್ತಿರುವ 2ನೇ ಪ್ರಕರಣ ಇದಾಗಿದೆ. ಇದಕ್ಕೂ ಮೊದಲು ಚಿಕಿತ್ಸೆ ಪಡೆಯುತ್ತಿದ್ದ ಬಾಲಕನೊಬ್ಬ ಜುಲೈ 21ರಂದು ನಿಫಾ ವೈರಸ್‌ಗೆ ಬಲಿಯಾಗಿದ್ದ.

ನಿಮ್ಮ ಮಕ್ಕಳು ಮೊಬೈಲ್ ನೋಡ್ತನೇ ಇರ್ತಾರಾ?; ಎಚ್ಚರ

ದರ್ಶನ್ ಸೆಲ್ ಗೆ ಟಿವಿ ಬರೋದ್ಯಾವಾಗ?; ಹೊರ ಜಗತ್ತಿನ ಮಾಹಿತಿ ತಿಳಿಯಲು ಕಾತುರ!

TAGGED:A young man who had left from Bangalore fell victim to the Nifa virusincreasing anxiety everywhere
Share This Article
Facebook Twitter Copy Link Print
Previous Article ಸದ್ದಿಲ್ಲದೆ ನಡೆದು ಹೋಯ್ತು ಅವಿವಾ ಬಿದ್ದಪ್ಪ ಸೀಮಂತ ಶಾಸ್ತ್ರ
Next Article ಸೆ.29ರಿಂದ ‘ಬಿಗ್ ಬಾಸ್ ಕನ್ನಡ 11’ ಶುರು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?