Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೈಂಗಿಕ ಕಿರುಕುಳ: ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ
ದೇಶಪ್ರಮುಖಮನರಂಜನೆ

ಲೈಂಗಿಕ ಕಿರುಕುಳ: ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

Share
2 Min Read
SHARE

newsics.com

ಬೆಂಗಳೂರು/ಹೈದರಾಬಾದ್: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ರನ್ನು ಪೊಲೀಸರು ಬಂಧಿಸಿದ್ದಾರೆ.

ಸೈಬರಾಬಾದ್ ಎಸ್‌ಒಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನಿ ಮಾಸ್ಟರ್ ಉತ್ತರದ ರಾಜ್ಯಗಳಿಗೆ ಪಲಾಯನ ಮಾಡಿ ಹೈದರಾಬಾದ್ ನಲ್ಲಿರುವ ತನ್ನ ಸ್ನೇಹಿತರ ಮನೆಗಳಲ್ಲಿ ಅಡಗಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು.

ಒಟ್ಟು ನಾಲ್ಕು ತಂಡಗಳು ಜಾನಿ ಮಾಸ್ಟರ್‌ಗಾಗಿ ಹುಡುಕಾಟವನ್ನು ಪ್ರಾರಂಭಿಸಿದ್ದವು. ಜಾನಿ ಮಾಸ್ಟರ್ ಈ ಹಿಂದೆಯೂ ಇದೇ ರೀತಿಯ ಆರೋಪದ ಮೇಲೆ ಆರು ತಿಂಗಳು ಜೈಲಿನಲ್ಲಿದ್ದರು.

ಮಹಿಳೆಯೊಬ್ಬರು ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಮಹಿಳೆಯ ದೂರಿನ ಆಧಾರದ ಮೇಲೆ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಜಾನಿ ಅವರೊಂದಿಗೆ ಕೆಲಸ ಮಾಡುತ್ತಿರುವ 21 ವರ್ಷದ ಮಹಿಳಾ ನೃತ್ಯ ಸಂಯೋಜಕಿಯೊಬ್ಬರು ಜಾನಿ ಮಾಸ್ಟರ್ ಕೆಲವು ಸಮಯದಿಂದ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು.

ಹೈದರಾಬಾದಿನ ನರಸಿಂಗಿಯಲ್ಲಿರುವ ಅವರ ನಿವಾಸದಲ್ಲಿ ಮತ್ತು ಹೊರಾಂಗಣ ಚಿತ್ರೀಕರಣಕ್ಕಾಗಿ ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಿಗೆ ಹೋದಾಗ ಜಾನಿ ಮಾಸ್ಟರ್ ತನ್ನ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ರಾಯದುರ್ಗಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಅವರ ವಿರುದ್ಧ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), ಕ್ರಿಮಿನಲ್ ಬೆದರಿಕೆ (506) ಮತ್ತು ಕಲಂ (2) ಮತ್ತು (ಎನ್) (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) (323) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ತೆಲುಗಿನ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಕನ್ನಡ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ.

ಜಾನಿ ಮಾಸ್ಟರ್ ತನ್ನ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಹೈದರಾಬಾದ್ ಹಾಗೂ ಮುಂಬೈನಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದರು.

ಶೂಟಿಂಗ್ ವ್ಯಾನ್‌ನಲ್ಲೇ ಅತ್ಯಾಚಾರ:

ಹಗಲಿನ ಶೂಟಿಂಗ್ ಸಮಯದಲ್ಲಿ, ಅವರು ವ್ಯಾನ್‌ಗೆ ಬಂದು ತಮ್ಮ ಪ್ಯಾಂಟ್‌ನ ಜಿಪ್ ಎಳೆದು, ಲೈಂಗಿಕ ಬಯಕೆಗಳನ್ನು ಪೂರೈಸಲು ನನಗೆ ಕಿರುಕುಳ ನೀಡುತ್ತಿದ್ದರು.. ಇಲ್ಲವಾದಲ್ಲಿ ಆಫರ್ ಇಲ್ಲದಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹೈದರಾಬಾದ್‌ನಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಾನು ಒಪ್ಪದಿದ್ದಾಗ ಬಲವಂತವಾಗಿ ಹಲ್ಲೆ ನಡೆಸಿದ್ದಾರೆ. ಜಾನಿ ಮಾಸ್ಟರ್ ಪತ್ನಿಯೂ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಮದುವೆಯಾಗುವಂತೆ ನನಗೆ ಒತ್ತಡ ಹೇರಿದ್ದರು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ಬೇಕಾಗಿದ್ದಾರೆ…

ಪಡ್ಡೆಹೈಕಳ ಬಿಸಿಯೇರಿಸಿದ ಶಾಲಿನಿ ಪಾಂಡೆ ಈ ಫೋಟೋ !

ಜಗತ್ತಿನ ಕುಳ್ಳ ಕೋಟ್ಯಧಿಪತಿ ಅಬ್ದು ಮದ್ವೆ ರದ್ದು!

ಸಾವಿರ ಕೋಟಿ‌ ಮೌಲ್ಯದ ಜೆಟ್ ಖರೀದಿಸಿದ ಮುಖೇಶ್ ಅಂಬಾನಿ!

TAGGED:harassment: Famous dance director Johnny Master arrested
Share This Article
Facebook Twitter Copy Link Print
Previous Article ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ
Next Article ಸಲ್ಮಾನ್ ತಂದೆ ಸಲೀಂ ಖಾನ್ ಗೆ ಮತ್ತೆ ಪ್ರಾಣ ಬೆದರಿಕೆ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?