newsics.com
ರಾಜಸ್ಥಾನ : ಮಹಿಳಾ ಅಧಿಕಾರಿಯೊಬ್ಬರು ಶಸ್ತ್ರಚಿಕಿತ್ಸೆ ನಂತರ ಕೋಮಾಗೆ ಜಾರಿ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನನದ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿದ್ದ ಪ್ರಿಯಾಂಕಾ ಬಿಷ್ಣೋಯ್ ಹೀಗೆ ಹಠಾತ್ ಸಾವಿಗೀಡಾದ ಮಹಿಳಾ ಅಧಿಕಾರಿ.ರಾಜಾಸ್ಥಾನದ ಜೋಧ್‌ಪುರದಲ್ಲಿ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿದ್ದ ಪ್ರಿಯಾಂಕಾ ಬಿಷ್ಣೋಯ್.
ಎರಡು ವಾಗಳ ಹಿಂದೆ ಅವರು ಜೋಧ್‌ಪುರಸ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಶಸ್ತ್ರಚಿಕಿತ್ಸೆಯ ನಂತರ ಅವರ ಪರಿಸ್ಥಿತಿ ಬಿಗಾಡಿಯಿಸಿದ್ದು, ಅವರು ಮತ್ತೆ ಮೇಲೆಳಲೇ ಇಲ್ಲ. ಶಸ್ತ್ರಚಿಕಿತ್ಸೆಯ ನಂತರ ಕೋಮಾಗೆ ಜಾರಿದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಪ್ರಿಯಾಂಕಾ ಅವರ ಸಂಬಂಧಿಗಳು ಜೋಧ್‌ಪುರದ ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಪೊಲೀಸ್ ತನಿಖೆ ನಡೆಸಲು ಆಗ್ರಹಿಸಿದ್ದಾರೆ.