newsics.com
ನವದೆಹಲಿ : ಬದ್ಗಾಮ್‌ಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರನ್ನು ಸಾಗಿಸುತ್ತಿದ್ದ ಬಸ್ ಅಪಘಾತದಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ.
2ನೇ ಹಂತದ ಚುನಾವಣಾ ನಿಯೋಜನೆಗಾಗಿ ತೆರಳುತ್ತಿದ್ದ ವೇಳೆ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳ ನೆರವಿಗೆ ತಕ್ಷಣದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಬಸ್ಸಿನಲ್ಲಿ ಸುಮಾರು 35 ಯೋಧರಿದ್ದರು ಎಂದು ಹೇಳಲಾಗುತ್ತಿದೆ. ಗಾಯಗೊಂಡ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ.
.