newsics.com
ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಈಗಾಗಲೇ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದರು.
ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.
ಅಕ್ರಮ ಡಿನೋಟಿಫಿಕೇಷ್ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎ.1 ಆರೋಪಿಯಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಭೂಮಿಯನ್ನು ಮೃತಪಟ್ಟವರ ಹೆಸರಿನಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ.