newsics.com
ಕನ್ನಡ ಬಿಗ್ ಬಾಸ್ ಸೀಸನ್ 11 ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಹಿಂದೆ ಒಂದೆರಡು ಪ್ರೋಮೊಗಳು ಬಿಡುಗಡೆ ಆಗಿ ಕುತೂಹಲ ಕೆರಳಿಸಿವೆ. ಇವಾಗ ಬಿಡುಗಡೆ ಆಗಿರುವ ಹೊಸ ಪ್ರೋಮೋನಲ್ಲಿ ಸುದೀಪ್ ಸ್ವರ್ಗ ಮತ್ತು ನರಕದ ಕತೆ ಹೇಳಿದ್ದಾರೆ. ಆ ಮೂಲಕ ಬಿಗ್ ಬಾಸ್ ಮನೆ ಈ ಬಾರಿ ಹೇಗಿರಲಿದೆ ಎಂಬ ಸಣ್ಣ ಸುಳಿವೊಂದನ್ನು ನೀಡಿದ್ದಾರೆ.
ಪ್ರೋಮೋದ ಆರಂಭದಲ್ಲಿಯೇ ಕೆಲವು ಯುವಕ-ಯುವತಿಯರು ಸ್ವರ್ಗದಲ್ಲಿ ಡೈನಿಂಗ್ ಟೇಬಲ್ ಮೇಲೆ ಕುಳಿತು ಖುಷಿಯಿಂದ ಆಹಾರ ಸೇವಿಸುತ್ತಿದ್ದಾರೆ. ಅದೇ ವಿಡಿಯೋ ಮುಂದುವರೆದರೆ ನರಕದಂತೆ ಕಾಣುವ ಭೀಕರ ಪ್ರದೇಶದಲ್ಲಿ ತಟ್ಟೆಯಲ್ಲಿ ಗಂಜಿ ಕುಡಿಯುತ್ತಿದ್ದಾರೆ ಬೆಂಕಿಯ ಕುಲುಮೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಗ ಬರುವ ಸುದೀಪ್, ಸ್ವರ್ಗದಲ್ಲಿರುವವರು, ನರಕದಲ್ಲಿರುತ್ತಾರೆ ನರಕದಲ್ಲಿರುವವರು ಸ್ವರ್ಗದಲ್ಲಿರುತ್ತಾರೆ ಎಂದು ಬಿಗ್ ಬಾಸ್ ಶೈಲಿಯಲ್ಲಿ ಸ್ವರ್ಗ ನರಕದ ಜೀವನದ ಬಗ್ಗೆ ಹೇಳಿದ್ದಾರೆ.