newsics.com
ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರದ ವಿರುದ್ಧ ಹೋರಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಆಘಾತ ಎದುರಾಗಿದೆ.
ಹೌದು, ಸಿಎಂಗ ಇದೀಗ Arkavathy denotification ಪ್ರಕರಣಕ್ಕೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ ಬಡಾವಣೆಯ ಭೂಮಿ ಡಿನೋಟಿಫಿಕೇಶನ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗದ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪತ್ರ ಬರೆದಿದ್ದಾರೆ.