newsics.com
ಕೊಲಂಬೋ: ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕೆ ಆಯ್ಕೆಯಾಗಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
ಎಡಪಂಥೀಯ ಒಲವು ಹೊಂದಿರುವ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹಾಲಿ ಉದಾರವಾದಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಭಾನುವಾರ ವರದಿ ಮಾಡಿದೆ.
ಶನಿವಾರ ಮತದಾನ ನಡೆಯಿತು. ದೇಶವು ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಮತ್ತು ಅದರ ಪರಿಣಾಮವಾಗಿ ರಾಜಕೀಯ ವಿಪ್ಲವದಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರಿಂದ ಈ ಚುನಾವಣೆ ಶ್ರೀಲಂಕಾಕ್ಕೆ ನಿರ್ಣಾಯಕವಾಗಿದೆ.
ಶ್ರೀಲಂಕಾದ ಮಾರ್ಕ್ಸ್ವಾದಿ ಒಲವುಳ್ಳ ನಾಯಕ ಅನುರಾ ಕುಮಾರ ದಿಸ್ಸಾನಾಯಕೆ ಅವರು ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ತಿನ್ನೋಕು, ಮಲಗೋಕು ಮಕ್ಕಳು ಫೋನ್ ಕೇಳ್ತಾರಾ? ಮೊಬೈಲ್ ಹುಚ್ಚು ಹೀಗೆ ಬಿಡಿಸಿ!
ನ್ಯಾಚುರಲ್ ಆಗಿಯೇ ನಿಮ್ಮ ಕಣ್ಣು ಶಾರ್ಪ್ ಆಗಿ ಕಾಣ್ಬೇಕಾ? ಈ ಟಿಪ್ಸ್ ಟ್ರೈ ಮಾಡಿ