newsics.com
ಬೆಂಗಳೂರು: ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ವಿವಾದದ ಬೆನ್ನಲ್ಲೇ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರತಿ ನಿತ್ಯ ನಂದಿನಿ ತುಪ್ಪವನ್ನೇ ತರಿಸಿಕೊಳ್ಳಲು ಟಿಟಿಡಿ ಮುಂದಾಗಿದೆ. ನಿತ್ಯ ಒಂದೊಂದು ಟ್ಯಾಂಕರ್ ಆಮದು ಮಾಡಿಕೊಳ್ಳಲು ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಮುಂದಾಗಿದೆ.
ಇನ್ನು ತಿರುಪತಿ ಲಡ್ಡು ವಿವಾದದ ಬಳಿಕ ಕೆಎಂಎಫ್ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ಮಾರ್ಗ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿದ ಕೆಎಂಎಫ್ ಎಂಡಿ ಜಗದೀಶ್, ಟಿಟಿಡಿಗೆ ತೆರಳುವ ನಂದಿನಿ ತುಪ್ಪದ ವಾಹನಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ ಜಿಪಿಎಸ್ GPS ಟ್ರ್ಯಾಕ್, ಎಲೆಕ್ಟ್ರಿಕ್ ಡೋರ್ ಅಳವಡಿಲಾಗಿದೆ. ಲ್ಯಾಬ್ ಟೆಸ್ಟ್ ಮಾಡಿದ ಬಳಿಕ ನಂದಿನ ತುಪ್ಪ ಪೂರೈಸಲಾಗುತ್ತೆ ಎಂದು ಮಾಹಿತಿ ನೀಡಿದರು.
ಜಿಪಿಎಸ್ ವಿಶೇಷತೆ
* ಟಿಟಿಡಿಗೆ ಕೆಎಂಎಫ್‌ನಿಂದ ಸರಕು ಸಾಗಿಸುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ.
* ತುಪ್ಪ ಇರುವ ಟ್ಯಾಂಕರ್‌ಗೆ ಜಿಪಿಎಸ್ ಸ್ಕ್ಯಾನರ್ ಲಾಕ್ ಅಳವಡಿಕೆ.
* ಇಲ್ಲಿ ಟ್ಯಾಂಕರ್ ಒಮ್ಮೆ ಲಾಕ್ ಆದ್ರೆ ಟಿಟಿಡಿಯಲ್ಲಿಯೇ ಓಪನ್ ಮಾಡಲು ಅವಕಾಶ.
* ಟಿಟಿಡಿಯಲ್ಲಿ ಓಪನ್ ಮಾಡಬೇಕು ಅಂದ್ರೆ ಪಾಸ್ ವರ್ಡ್ ಕಡ್ಡಾಯ.
* ಟ್ಯಾಂಕರ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ತಕ್ಷಣ ಕೆಎಂಎಫ್ ಅಧಿಕಾರಿಗಳಿಗೆ ಒಟಿಪಿ ರವಾನೆ.
* ಒಟಿಪಿ ನಂಬರ್ ಹೇಳಿದ್ರೆ ಮಾತ್ರ ಓಪನ್ ಆಗಲಿರುವ ತುಪ್ಪದ ಟ್ಯಾಂಕರ್.