newsics.com
ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ನಾಲೈದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಮುಂದಿನ 24 ಗಂಟೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಲಕ್ಷಣ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ. 23ರಿಂದ 25ರವರೆಗೆ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಿಗೆ ಬೇರೆ ಬೇರೆ ದಿನಗಳಲ್ಲಿ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.