newsics.com
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ15, 16, 17ನೇ ಆರೋಪಿಗಳಿಗೆ ಜಾಮೀನು ದೊರೆತಿದೆ.
ಆದರೆ ನಟ ದರ್ಶನ್ ಹಾಗೂ ಪವಿತ್ರಾಗೌಡಗೆ ಜಾಮೀನು ಸಿಕ್ಕಿಲ್ಲ. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಲಾಗಿದೆ.
ಸದ್ಯ ಅವರು ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಿಕೆ ಆಗಿದೆ.
ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ.
ಎ15 ಕಾರ್ತಿಕ್, ಎ16 ಕೇಶವಮೂರ್ತಿ, ಎ17 ನಿಖಿಲ್ ನಾಯ್ಕ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮೂವರಿಗೂ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಎ15 ಕಾರ್ತಿಕ್ ಮತ್ತು ಎ17 ನಿಖಿಲ್ ನಾಯ್ಕ್ ಗೆ 57ನೇ ಸೆಷನ್ಸ್ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ. ನ್ಯಾ.ಜೈಶಂಕರ್ ಅವರಿಂದ ಜಾಮೀನು ನೀಡಿ ಆದೇಶ ಹೊರಡಿಲಾಗಿದೆ. ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.