newsics.com
ಹೈದರಾಬಾದ್: ತಿರುಪತಿ ದೇವಸ್ಥಾನದ ಲಡ್ಡು ವಿಚಾರ ಭಾರೀ ಸದ್ದು ಮಾಡ್ತಿದೆ. ಈ ಬಗ್ಗೆ ಪವನ್ ಕಲ್ಯಾಣ್ ಮತ್ತು ಪ್ರಕಾಶ್ ರಾಜ್ ನಡುವೆ ಮಾತಿನ ಸಮರ ಶುರುವಾಗಿದೆ. ಈ ಮಧ್ಯೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಸೂಪರ್ಸ್ಟಾರ್ ಪವನ್ ಕಲ್ಯಾಣ್ ತಿರುಪತಿ ಲಡ್ಡು ತನಿಖೆಗೆ ಆದೇಶಿಸಿದ್ದಾರೆ.
ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಮೀನಿನ ಎಣ್ಣೆ, ಹಂದಿಯ ಕೊಬ್ಬು ಮತ್ತು ದನದ ಕೊಬ್ಬು) ಸೇರಿಸುವುದರಿಂದ ಜನರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದು ಪವನ್ ಕಲ್ಯಾಣ್ ಪೋಸ್ಟ್ನಲ್ಲಿ ಹೇಳಿದ್ದರು. ಇನ್ನು ಪವನ್ ಕಲ್ಯಾಣ್ ಟ್ವೀಟ್ ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಡಿಯರ್ ಪವನ್ ಕಲ್ಯಾಣ್… ನೀವು ಡಿಸಿಎಂ ಆಗಿದ್ದೀರಿ, ರಾಜ್ಯದಲ್ಲಿ ಇದು ನಡೆದಿದೆ… ದಯವಿಟ್ಟು ತನಿಖೆ ನಡೆಸಿ, ತಪ್ಪಿತಸ್ಥರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಿ” ಇದನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡಬೇಡಿ, ಮೊದಲು ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಕ್ಷೆ ವಿಧಿಸಿ ಎಂದು ಪ್ರಕಾಶ್ ಪವನ್ ಕಲ್ಯಾಣ್ ಅವರಿಗೆ ಮನವಿ ಮಾಡಿದ್ದಾರೆ.