newsics.com
ಬೆಂಗಳೂರು : ಬೆಂಗಳೂರಿಗರಿಗೆ ಕಾವೇರಿ ನೀರಿನ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಕೆ ಶಿವಕುಮಾರ್ ಅವರೇ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕು, ಹಲಗೂರು ಸಮೀಪದ ತೊರೆಕಾಡನಹಳ್ಳಿಯಲ್ಲಿ ಕಾವೇರಿ 5ನೇ ಹಂತದಲ್ಲಿ ನಿರ್ಮಿಸಲಾದ ಜಲರೇಚಕ ಯಂತ್ರಾಗಾರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ನೀರಿನ ದರವನ್ನು ಏರಿಕೆ ಮಾಡಲಾಗುತ್ತದೆ. ಯಾವಾಗಿನಿಂದ ನೀರಿನ ದರ ಏರಿಕೆ ಮಾಡುತ್ತೇವೆ ಎಂಬುದರ ಕುರಿತು ಶೀಘ್ರದಲ್ಲಿ ಹೇಳುತ್ತೆನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾವೇರಿನ ನೀರಿನ ದರ ಏರಿಕೆಯಾಗುವುದು ಪಕ್ಕಾ ಆದಂತಾಗಿದೆ.
ಸದ್ಯಕ್ಕೆ ನೀರಿನ ಶುಲ್ಕ ಹೆಚ್ಚಿಸದೇ ಇರಲು ನಿರ್ಧರಿಸಿತ್ತು. ಆದ್ರೆ, ಇದೀಗ ಡಿಕೆ ಶಿವಕುಮಾರ್ ಏಕಾಏಕಿ ಕಾವೇರಿನ ನೀರಿನ ದರ ಏರಿಕೆ ಮಾಡಲಾಗುತ್ತೆ ಎಂದು ಅಧಿಕೃತವಾಗಿಯೇ ಘೋಷಣೆ ಮಾಡಿದ್ದಾರೆ.