Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6‌ ಮಂದಿ‌ ಬಂಧನ
ಕರ್ನಾಟಕಪ್ರಮುಖ

ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6‌ ಮಂದಿ‌ ಬಂಧನ

Share
1 Min Read
SHARE

newsics.com

ಕಲಬುರಗಿ: ಮದುವೆ ಮಾತುಕತೆ ವಿಚಾರದಲ್ಲಿ ಉಂಟಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸುಮಿತ್ ಕೊಲೆಯಾದ ಯುವಕ.

ಸುಮಿತ್ ಸಹೋದರ ಸಚಿನ್ ಮತ್ತು ಉಷಾ ಪ್ರೀತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣ ಕುಮಾರ ಹಾಗೂ ಇತರರು ಸಚಿನ್ ಮನೆಗೆ ಮದುವೆ ಮಾತುಕತೆಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಸಚಿನ್ ಇರಲಿಲ್ಲ. ಸುಮಿತ್ ಮತ್ತು ಪೋಷಕರು ಮನೆಯಲ್ಲಿದ್ದರು. ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಸುಮಿತ್‌ಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರೀತಿಸಿದ ಯುವತಿ ಉಷಾ, ಆಕೆಯ ಸಹೋದರ ವರುಣಕುಮಾರ, ತಂದೆ ರಾಜಕುಮಾರ, ತಾಯಿ ಜಯಮ್ಮ, ವರುಣ ಕುಮಾರನ ಸ್ನೇಹಿತರಾದ ಸಿದ್ದು, ಪ್ರಜ್ವಲ್ ಅವರನ್ನು ಬಂಧಿಸಿದ್ದಾರೆ. ಮತ್ತಿಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಸ್. ಶರಣಪ್ಪ ತಿಳಿಸಿದ್ದಾರೆ.

TAGGED:6 arrested including young womanArgument during marriage negotiations: Young man killed
Share This Article
Facebook Twitter Copy Link Print
Previous Article ಮೈಸೂರು ದಸರಾ ಆನೆಗಳ ಜತೆ ಸೆಲ್ಫಿ, ರೀಲ್ಸ್‌ ನಿಷೇಧಿಸಿ ಸರ್ಕಾರ ಆದೇಶ
Next Article ಅದು ದನದ ಮೂಳೆ, ಮನುಷ್ಯನದಲ್ಲ… ವೈಜ್ಞಾನಿಕ ಪರೀಕ್ಷೆಯಲ್ಲಿ ದೃಢ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?