newsics.com
ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಪ್ರಕಟಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸುವಂತೆ ಎಸ್ಪಿ ಹಾಗೂ ಡಿಸಿಪಿಗಳಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚಿಸಿದ್ದಾರೆ.
ರಾಜ್ಯದ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚವರಿ ಪೊಲೀಸರನ್ನು ನಿಯೋಜಿಸುವಂತೆ ಅಲೋಕ್ ಮೋಹನ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ನಡುವೆ ಖಾಸಗಿ ದೂರಿನ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಮನವಿ ಮಾಡಲು ಸಿದ್ಧತೆ ನಡೆದಿದೆ. ಹೈಕೋರ್ಟ್ ಆದೇಶ ಪ್ರತಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಸಲ್ಲಿಸಲು ದೂರುದಾರರಾದ ಸಿ.ಜೆ. ಅಬ್ರಹಾಂ ಹಾಗೂ ಸ್ನೇಹಮಯಿ ಕೃಷ್ಣ ಮುಂದಾಗಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿದರೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.
ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್