newsics.com
ಕೆಲಸದ ಒತ್ತಡದಿಂದ ಕುರ್ಚಿ ಮೇಲೆ ಕುಳಿತೇ ಬ್ಯಾಂಕ್ ನ ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಲಕ್ನೋದಲ್ಲಿ ನಡೆದಿದೆ.
ಸದಾಫ್ ಫಾತಿಮಾ ಮೃತ ಉದ್ಯೋಗಿ ಎಂದು ತಿಳಿದು ಬಂದಿದೆ. ಇವರು HDFC ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್ 24 ರಂದು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕುರ್ಚಿಯಿಂದ ಕೆಳಗೆ ಬಿದ್ದಿದ್ದರು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.