newsics.com
ಬೆಂಗಳೂರು: ನಗರದ ವೈಯಾಲಿಕಾವಲ್‌ನಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕೊಲೆ ಮಾಡಿಪರಾ್ಇಯಾಗಿದ್ದ ಹಂತಕ ಒಡಿಶಾದಪ್ಲಿ ಆತ್ನಹತ್ಯೆ ಮಾಡಿಕೊಂಡಿದ್ದಾನೆ.
ಎರಡು ದಿನಗಳ ಹಿಂದೆ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಫ್ರಿಜ್ನಲ್ಲಿ ಮಹಾಲಕ್ಷ್ಮಿ ಮೃತ ದೇಹವನ್ನು 59ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯಾಗಿರುವ ಮುಕ್ತಿ ರಂಜನ್ ರಾಯ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಆತನನ್ನು ಬಂಧಿಸಲು ಬೆಂಗಳೂರಿನಿಂದ ತೆರಳಿದ್ದರು.
ಆದರೆ ಮಹಾಲಕ್ಷ್ಮಿ ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ಮುಕ್ತಿ ರಂಜನ್ ರಾಯ್ ಮಹಾಲಕ್ಷ್ಮಿಯ ಸಹೋದ್ಯೋಗಿ ಎಂದು ತಿಳಿದು ಬಂದಿದೆ. ಮುಕ್ತಿ ರಂಜನ್ ರಾಯ್ ಬೆಂಗಳೂರಿನ ಹೆಬ್ಬಗೋಡಿಯಲ್ಲಿ ನೆಲೆಸಿದ್ದ.
ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮಿಯನ್ನ ರಂಜನ್ ಪ್ರೀತಿಸುತ್ತಿದ್ದ.
ಆದರೆ ಇಬ್ಬರ ಮಧ್ಯ ಅದೇನು ಮನಸ್ತಾಪ ಉಂಟಾಯಿತೋ ಗೊತ್ತಿಲ್ಲ. ಸೆಪ್ಟೆಂಬರ್ 1 ರಂದು ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್ ಇಬ್ಬರು ಕೆಲಸಕ್ಕೆ ಹಾಜರಾಗಿದ್ದಾರೆ. ಬಳಿಕ ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮಿ ವಾರದ ರಜೆ ತೆಗೆದುಕೊಂಡಿದ್ದಾಳೆ. ಸೆಪ್ಟೆಂಬರ್ 2ರಂದು ತಾಯಿಯನ್ನು ಭೇಟಿಯಾಗಲು ತಾಯಿಯ ಮನೆಗೆ ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.
ಆದರೆ ಅಷ್ಟರಲ್ಲಿ ಆರೋಪಿ ಮುಕ್ತಿ ರಂಜನ್ ಮಹಾಲಕ್ಷ್ಮಿಯ ಕಥೆ ಮುಗಿಸಿದ್ದಾನೆ. ಆಕೆಯನ್ನು ಭೀಕರವಾಗಿ ಕೊಂದು ತುಂಡು ತುಂಡಾಗಿ ಕತ್ತರಿಸಿ, ಫ್ರಿಜ್ ನಲ್ಲಿ ಇಟ್ಟು ಪರಾರಿಯಾಗಿದ್ದಾನೆ.