newsics.com
ಬೆಂಗಳೂರು: ನಗರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಚು ರೂಪಿಸಿದ್ದ ಎನ್ನಲಾದ ಶಂಕಿತ ಉಗ್ರನೊಬ್ಬನನ್ನು ಎನ್ಐಎ ಅಧಿಕಾರಿಗಳು ಆನೇಕಲ್‌ನಲ್ಲಿ ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪ್ರದೇಶದಲ್ಲಿ ಶಂಕಿತ ಈ ಉಗ್ರನನ್ನು ಬಂಧಿಸಿದ್ದಾರೆ.
ಜಿಗಣಿಯಲ್ಲಿ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬ ಶಂಕಿತ ಉಗ್ರನನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಎನ್‌ಐಎ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಗಿರೀಶ್ ಬೋರಾನನ್ನು ಬಂಧಿಸಿದ್ದಾರೆ.
ಸದ್ಯ, ಗಿರೀಶ್ ಬೋರಾ ಅಲಿಯಾಸ್ ಗೌತಮನನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮ ಮೆಟ್ರೋದಲ್ಲಿ ಭಾರೀ ಜನದಟ್ಟಣೆ: ಪ್ರಜ್ಞೆ ತಪ್ಪಿ ಬಿದ್ದ ಯುವತಿ, ಕರೆದರೂ ನೆರವಿಗೆ ಬಾರದ ಮೆಟ್ರೋ ಸಿಬ್ಬಂದಿ!