newsics.com
ಬೆಂಗಳೂರು: ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಮುಡಾ ಹಗರಣದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ, ಸಂಭಾವ್ಯ ಸಿಬಿಐ ತನಿಖೆಯಿಂದ ಬಚಾವಾಗಲು ಹರಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಮುಡಾ ಹಗರಣದಲ್ಲಿ ಸಿಬಿಐ ತನಿಖೆ ಹೊಡೆತದಿಂದ ತಪ್ಪಿಸಿಕೊಳ್ಳಲು ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಅನುಮತಿಯನ್ನು ಹಿಂತೆಗೆದುಕೊಂಡು ಮಹತ್ವದ ತೀರ್ಮಾನ ಮಾಡಲಾಗಿದೆ.
ದೆಹಲಿ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ಅಡಿಯಲ್ಲಿ ಕರ್ನಾಟಕದಲ್ಲಿ ಸಿಬಿಐ ಮುಕ್ತ ತನಿಖೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಈ ಹಿಂದೆ ಹೊರಡಿಸಲಾಗಿದ್ದ ಸಿಬಿಐ ಮುಕ್ತ ತನಿಖೆಯ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ನಿರ್ಧಾರ ಕಾರ್ಯಗತವಾದರೆ ಇನ್ನು ಮುಂದೆ ಸಿಬಿಐ ಅಧಿಕಾರಿಗಳು ರಾಜ್ಯದಲ್ಲಿ ಯಾವುದೇ ಪ್ರಕರಣದ ತನಿಖೆ ನಡೆಸಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆದುಕೊಂಡೇ ಮುಂದುವರಿಯಬೇಕಿದೆ.
ಅಯೋಧ್ಯೆ; ಪ್ರಯಾಗ್ ರಾಜ್ ದೇವಾಲಯದಲ್ಲಿ ಮಿಠಾಯಿ ನೈವೇದ್ಯಕ್ಕೆ ಬ್ರೇಕ್!