Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಾರದೋ ಕೋಪ ಯಾರ ಮೇಲೋ ತೋರಿಸೋದು: ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅಸಮಾಧಾನ, ನಾಳೆಯೇ ವಿಚಾರಣೆಗೆ ಮುಂದಾದ ಪೀಠ
ಕರ್ನಾಟಕಪ್ರಮುಖ

ಯಾರದೋ ಕೋಪ ಯಾರ ಮೇಲೋ ತೋರಿಸೋದು: ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅಸಮಾಧಾನ, ನಾಳೆಯೇ ವಿಚಾರಣೆಗೆ ಮುಂದಾದ ಪೀಠ

Share
2 Min Read
SHARE

newsics.com

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿ ಹೈಕೋರ್ಟ್ ಮಾಡಿರುವ ಆದೇಶದ ಸುದ್ದಿಯನ್ನು ನಿರೂಪಕ ರಾಹುಲ್‌ ಶಿವಶಂಕರ್‌ ವರದಿ ಮಾಡಿದ್ದರು. ಇದರ ಬೆನ್ನಿಗೇ ಸಿಐಡಿ ನೋಟಿಸ್‌ ಜಾರಿ ಮಾಡಿದೆ ಎಂದು ಆಕ್ಷೇಪಿಸಲಾಗಿದೆ.

ಸಿಐಡಿಯ ಈ ಕ್ರಮಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ‘ಯಾರದೋ ಕೋಪ ಯಾರ ಮೇಲೋ ತೋರಿಸೋದು’ ಎಂದು ಮೌಖಿಕವಾಗಿ ಹೇಳಿದೆ ಎಂದು ಬಾರ್ ಅ್ಯಂಡ್ ಬೆಂಚ್ ವರದಿ‌ ಮಾಡಿದೆ.

ಅಷ್ಟೇ ಅಲ್ಲ, ಸುದ್ದಿ ನಿರೂಪಕ ರಾಹುಲ್‌ ಶಿವಶಂಕರ್‌ ವಿರುದ್ಧದ ಕೋಮು ದ್ವೇಷ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಶುಕ್ರವಾರ ವಿಚಾರಣೆಗೆ ಪಟ್ಟಿ ಮಾಡುವಂತೆ ಹೈಕೋರ್ಟ್ ರಿಜಿಸ್ಟ್ರಿಗೆ ಗುರುವಾರ ಸೂಚಿಸಿದೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿ ತಾವು ಮಾಡಿರುವ ಆದೇಶದ ಸುದ್ದಿಯನ್ನು ರಾಹುಲ್‌ ಶಿವಶಂಕರ್‌ ಅವರು ವರದಿ ಮಾಡಿದ್ದರು. ಇದರ ಬೆನ್ನಿಗೇ ಮಾರ್ಚ್‌ನಿಂದ ಬಾಕಿ ಇರುವ ಪ್ರಕರಣದಲ್ಲಿ ರಾಹುಲ್‌ ಶಿವಶಂಕರ್‌ಗೆ ತನಿಖೆಗೆ ಅಕ್ಟೋಬರ್‌ 10ರ ಒಳಗೆ ಹಾಜರಾಗಲು ಸಿಐಡಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ವಕೀಲ ಅಭಿಷೇಕ್‌ ಕುಮಾರ್ ಅವರು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಗಮನಸೆಳೆದರು.

ಆಗ ಪೀಠವು, ಪ್ರಕರಣದಲ್ಲಿ ಮಧ್ಯಂತರ ಆದೇಶ ಇದೆಯೇ. ಮಧ್ಯಂತರ ಆದೇಶ ಇದ್ದರೆ ಏನೂ ಮಾಡಲಾಗದು ಎಂದಿತು.

ಆಗ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ರಾಜ್ಯ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಎನ್‌. ಜಗದೀಶ್‌ ಅವರು, ಆತುರದ ನಿರ್ಧಾರಕ್ಕೆ ಮುಂದಾಗಬಾರದು ಎಂದು ಆದೇಶ ಮಾಡಲಾಗಿದೆ. ರಾಹುಲ್‌ ಶಿವಶಂಕರ್‌ ಅವರನ್ನು ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೇಳುತ್ತಿಲ್ಲ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾಗುವಂತೆ ಮಾತ್ರ ಸೂಚಿಸಲಾಗಿದೆ ಎಂದರು.

ಇದಕ್ಕೆ ಅಭಿಷೇಕ್‌ ಅವರು “ಹಲವು ತಿಂಗಳಿಂದ ಪ್ರಕರಣದಲ್ಲಿ ಏನೂ ಮಾಡಿಲ್ಲ. ಮುಡಾ ಪ್ರಕರಣದ ಸುದ್ದಿ ವರದಿ ಮಾಡಿದೆ ಎಂಬ ಏಕೈಕ ಕಾರಣಕ್ಕೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದರು. ಆಗ ಪೀಠವು ನಾಳೆ ಪ್ರಕರಣವನ್ನು ಪಟ್ಟಿ ಮಾಡಬೇಕು. ಸುಮ್ನೆ ಯಾರದೋ ಕೋಪವನ್ನು ಯಾರದೋ ಮೇಲೆ ಹಾಕೋದು ಎಂದು ಅಸಮಾಧಾನ ವ್ಯಕ್ತಪಡಿಸಿತು.

ಅಕ್ಟೋಬರ್‌ 4ರ 10.30ರ ಒಳಗೆ ಬೆಂಗಳೂರಿನ ಕಾರ್ಲಟನ್‌ ಹೌಸ್‌ನಲ್ಲಿರುವ ಸೈಬರ್‌ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಶಿವಶಂಕರ್‌ ಅವರಿಗೆ ಡಿಟೆಕ್ಟಿವ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ ಲಕ್ಷ್ಮಣ್‌ ಹುಂದ್ರಾದ್‌ ಸೆಪ್ಟೆಂಬರ್‌ 25ರಂದು ನೋಟಿಸ್‌ ಜಾರಿ ಮಾಡಿದ್ದಾರೆ. ಈ ಪ್ರಕರಣದ ವಿಚಾರಣೆಯು 2024ರ ಮಾರ್ಚ್‌ 21ರಂದು ಕೊನೆಯ ಬಾರಿ ವಿಚಾರಣೆ ನಡೆದಿತ್ತು. ಅಂದಿನಿಂದ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಆಗಿರಲಿಲ್ಲ.

ಮಂಗಳೂರಿನ ವಕ್ಫ್‌ ಆಸ್ತಿಗಳು ಮತ್ತು ಹಜ್‌ ಭವನ ಹಾಗೂ ಕ್ರಿಶ್ಚಿಯನ್‌ ಸಮುದಾಯಗಳ ಪ್ರಾರ್ಥನಾ ಸ್ಥಳಗಳಿಗೆ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಿರುವುದರ ಸಂಬಂಧ ರಾಹುಲ್‌ ಶಿವಶಂಕರ್‌ ಎಕ್ಸ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೋಲಾರದ ಕೌನ್ಸಿಲರ್‌ ಎನ್‌ ಅಂಬರೀಷ್‌ ಅವರು ರಾಹುಲ್‌ ಶಿವಶಂಕರ್ ಅವರಿಗೆ ಕೋಮು ದ್ವೇಷ ಹರಡುವ ಚಾಳಿಯಿದೆ ಎಂದು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 153ಎ ಮತ್ತು 505 ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಬಗ್ಗೆ ಕೋರ್ಟ್ ಆತುರದ ನಿರ್ಧಾರ ಬೇಡ ಎಂದಿತ್ತು.

TAGGED:bench to hear tomorrowShowing someone's anger on someone: High Court Justice Nagaprasanna's displeasure
Share This Article
Facebook Twitter Copy Link Print
Previous Article KBC ಸೀಸನ್ 16ರಲ್ಲಿ 1 ಕೋಟಿ ಗೆದ್ದ ಮೊದಲಿಗ ಚಂದೇರ್ ಪ್ರಕಾಶ್
Next Article ಸಿದ್ದು ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?