newsics.com
ನವದೆಹಲಿ: ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
2002ರಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈಯ್ಯಲಾಗಿತ್ತು. ಇನ್ನು ಈ ಕೇಸ್ ನ 11 ಅಪರಾಧಿಗಳಿಗೆ ನೀಡಲಾಗಿದ್ದ ಕ್ಷಮಾದಾನ ರದ್ದುಪಡಿಸುವ ಸಂದರ್ಭದಲ್ಲಿ ರಾಜ್ಯದ ವಿರುದ್ಧ ಕೆಲವು ಆಕ್ಷೇಪಣೆಗಳನ್ನೊಳಗೊಂಡಿರುವ ನ್ಯಾಯಾಲಯದ ತೀರ್ಪನ್ನು ಪರಿಶೀಲಿಸುವಂತೆ ಗುಜರಾತ್ ಸರ್ಕಾರ ಅರ್ಜಿ ಸಲ್ಲಿಸಿತ್ತು..ಸದ್ಯ ಈ ಅರ್ಜಿಯನ್ನು ಸುಪ್ರೀಂ ಕೊರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಬಿ. ವಿ. ನಾಗರತ್ನ ಮತ್ತು ಉಜ್ಜಲ ಭುಯಾನ್ ಅವರಿದ್ದ ನ್ಯಾಯಪೀಠ, ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತು.
ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಆದೇಶ ತೃಪ್ತಿದಾಯಕವಾಗಿದೆ. ದಾಖಲೆ ಆಧಾರದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ. ಹಾಗೆಯೇ ಪುನರ್ ಪರಿಶೀಲಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಈ ಕಾರಣಗಳಿಂದಾಗಿ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.