newsics.com
ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಅಕ್ಟೋಬರ್ 6ರಿಂದ ಆರಂಭವಾಗಲಿರುವ ಟಿ20 ಸರಣಿಗೆ ಬಿಸಿಸಿಐ 15 ಸದಸ್ಯರ ಬಲಿಷ್ಟ ಭಾರತ ತಂಡವನ್ನು ಪ್ರಕಟಿಸಿದೆ.
ತಂಡದ ನಾಯಕತ್ವ ಸೂರ್ಯಕುಮಾರ್ ಯಾದವ್ ಅವರ ಕೈಯಲ್ಲೇ ಇದ್ದು, ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೆ, ಒಬ್ಬ ಬೌಲರ್ 3 ವರ್ಷಗಳ ನಂತರ ತಂಡಕ್ಕೆ ಮರಳಿದ್ದಾರೆ. ಎಲ್ಲಾ ಊಹಾಪೋಹಗಳು ಮತ್ತು ನಿರೀಕ್ಷೆಗಳ ನಡುವೆಯೂ ಸ್ಟಾರ್ ವಿಕೆಟ್ ಕೀಪರ್ ಇಶಾನ್ ಕಿಶನ್ ಆಯ್ಕೆಗಾರರ ಮನ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.
ತಂಡಕ್ಕೆ ಆಯ್ಕೆಯಾಗಿರುವ ಎರಡು ಹೊಸ ಮುಖಗಳಲ್ಲಿ ಇಬ್ಬರು ಕೂಡ ಐಪಿಎಲ್ ಸ್ಟಾರ್‌ಗಳೇ ಆಗಿದ್ದಾರೆ. ಯುವ ವೇಗಿ ಮಯಾಂಕ್ ಯಾದವ್ ಸೇರಿದ್ದರೆ, ಇನ್ನೊಬ್ಬರು ನಿತೀಶ್ ಕುಮಾರ್ ರೆಡ್ಡಿ ಆಗಿದ್ದಾರೆ. ಈ ಇಬ್ಬರು ಆಟಗಾರರು ಪ್ಲೇಯಿಂಗ್ ಇಲೆವೆನ್ನಲ್ಲಿ ಆಯ್ಕೆಯಾಗುವ ಸಾಧ್ಯತೆ ಇದ್ದು, ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಆಡಲಿದ್ದಾರೆ.
ಬಾಂಗ್ಲಾ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್, (ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.
https://www.newsics.com/2024/09/29/lebanon-pager-explosion-indias-decision-to-block-chinese-surveillance-equipment/