newsics.com
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ನಾಳೆಯಿಂದ (ಸೆ.30) ತನಿಖೆ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ನಾಲ್ಕು ತನಿಖಾ ತಂಡ ರಚನೆ ಮಾಡಲಾಗಿದೆ.
ಹೈಕೋರ್ಟ್‌ನಿಂದ ತನಿಖೆಗೆ ತಡೆ ಸಿಗದಿದ್ದರೆ ಸಿಎಂ ಸಿದ್ದರಾಮಯ್ಯಗೆ ಮುಜುಗರವಾಗುವ ಸಾಧ್ಯತೆಯಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಕ್ಕೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಮೈಸೂರು ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ.
ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ
ಯಾವ್ಯಾವ ಸೆಕ್ಷನ್?
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.
ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ
ಟ್ಯಾಂಕರ್ ಪಲ್ಟಿ: ಸಾವಿರಗಟ್ಟಲೆ ಲೀಟರ್ ಹಾಲು ರಸ್ತೆ ಪಾಲು, ಬಿಂದಿಗೆ, ಕ್ಯಾನ್‌ಗಳಲ್ಲಿ ಹಾಲು ತುಂಬಿಕೊಂಡ ಗ್ರಾಮಸ್ಥರು
IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ