newsics.com
ಕೋಲಾರ: ಬೆಂಗಳೂರಿನ ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ (ಐಎಎಫ್) ಸೇರಿದ ಚೇತಕ್ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಕೋಲಾರದ ಕೆಜಿಎಫ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಮೂಲಗಳ ಪ್ರಕಾರ ವಿಮಾನದಲ್ಲಿ ಮೂವರು ಪೈಲಟ್‌ಗಳಿದ್ದರು. ಡಿಕೆ ಹಳ್ಳಿಯಲ್ಲಿ ಹೆಲಿಕಾಪ್ಟರ್ ಬಂದಿಳಿದ ಬಗ್ಗೆ ತಮ್ಮ ಹೊಲದಲ್ಲಿದ್ದ ಕೆಲಸ ಮಾಡುತ್ತಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಧಾವಿಸಿತು. ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಗಳಿಂದ ಕೂಡಿದ್ದರಿದ ಸಿಬ್ಬಂದಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ತಿಳಿದುಬಂದಿದೆ.