newsics.com
ಬೆಂಗಳೂರು : ಮುಡಾ ಹಗರಣ ಪ್ರಕರಣದಲ್ಲಿ ಇದೀಗ ಇಡಿ ಪ್ರವೇಶ ಮಾಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿದೆ.
ಬೆನ್ನಲ್ಲಿಯೇ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ (ಇಡಿ) ದೂರು ನೀಡಿದ್ದರು. ಮೈಸೂರು ಲೋಕಾಯುಕ್ತದಲ್ಲಿ ದಾಖಲಾದ ಎಫ್‌ಐಆರ್ ಆಧರಿಸಿ ಇದೀಗ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಇಡಿ ಸಂಸ್ಥೆಯಿಂದಲೂ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡಿದೆ.
ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ (Enforcement Directorate) ಇಸಿಐಆರ್ ದಾಖಲಿಸಿದೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ (ಇಡಿ) ಕೇಸಿನಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ 1 (ಎ1 ಆರೋಪಿ) ಆಗಿದ್ದಾರೆ.
ಸಿಎಂ ವಿರುದ್ಧ ದಾಖಲಾದ ECIR ಅಂದ್ರೇನು?
PMLA ಕಾಯ್ದೆಯಡಿ ECIR ದಾಖಲಾಗಿದ್ದು, ಈ ECIR ಪೊಲೀಸರ FIRಗೆ ಸರಿ ಸಮಾನವಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.