newsics.com
ಬೆಂಗಳೂರು : ಮುಡಾ ಹಗರಣ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.
ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಈ ಮೂಲಕ ಈ ಮುಡಾ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಇನ್ನು ಸಿಎಂ ಪತ್ನಿ ಮುಡಾಗೆ ಬರೆದ ಪತ್ರದಲ್ಲೇನಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವ ಕುರಿತು.
ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.
ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರ ಬರೆದಿದ್ದಾರೆ.