newsics.com
ಬೆಂಗಳೂರು: ಮುಡಾ ಕೇಸ್ ಸಂಬಂಧ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುತ್ತಿದ್ದಂತೆ ಇಡಿ ಅಲರ್ಟ್ ಆಗಿದೆ.
ಹೌದು, ಮುಡಾದ ಹಣವನ್ನು ಬೇರೆ ಕ್ಷೇತ್ರಕ್ಕೆ ಬಳಸಿದ ಪ್ರಕರಣದ ಬಗ್ಗೆ ಇಡಿ ಇಸಿಐಆರ್ ದಾಖಲಿಸಿ ತನಿಖೆಗೆ ಮುಂದಾಗಿದೆ. ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಬಹುದಾಗಿದೆ. ಅಷ್ಟೇಅಲ್ಲ, ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.
ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ರಾಜ್ಯಾದ್ಯಂತ ಸಿಎಂ ಆಪ್ತರ ನಿವಾಸ ಅಥವಾ ಕಚೇರಿ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಇದೆ.