newsics.com
ಬೆಂಗಳೂರು: ದಕ್ಷಿಣ ಕನ್ನಡ ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಇದರ ಬೆನಲ್ಲೇ ಇದೀಗ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಭಾರೀ ಮುಖಭಂಗವಾಗಿದೆ.
ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಮರು ಚುನಾವಣೆ ಅ.21 ರಂದು ನಿಗದಿಯಾಗಿದೆ. ಬಿಜೆಪಿ ಗೆದ್ದಿದ್ದ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ಟಿಕೆಟ್ ಬಿಜೆಪಿ ಪಾಲಿಗೆ ಸಿಕ್ಕಿದ್ದು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ.