newsics.com
ಬೆಂಗಳೂರು : ಪೊಲೀಸ್ ಠಾಣೆಯಲ್ಲೇ ಇದೀಗ ಇನ್ಸ್ಪೆಕ್ಟರ್ ಓರ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ
ಠಾಣೆಯ ಮಾಜಿ ಇನ್ಸ್ಪೆಕ್ಟರ್ ವಿರುದ್ಧ ಹಾಲಿ ಇನ್ಸ್ಪೆಕ್ಟರ್ ಎಫ್ಐಆರ್ ದಾಖಲಿಸಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡಿರಲಿಲ್ಲ. ಅಲ್ಲದೇ ಹಿಂದಿನ ಇನ್ಸ್ ಪೆಕ್ಟರ್ ಹಸ್ತಾಂತರಿಸಿದ್ದ ಮಾಲು ಸಹ ಠಾಣೆಗೆ ಹಾಜರುಪಡಿಸಿರಲಿಲ್ಲ.
ವಶಪಡೆದ ಮಾಲನ್ನು ಹಿಂತಿರುಗಿಸುವ ಬಗ್ಗೆ ಹಲವಾರು ಬಾರಿ ಹೇಳಲಾಗಿತ್ತು. ಅಲ್ಲದೇ ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನಾ ಪತ್ರ ನೀಡಿದರೂ ಉತ್ತರಿಸಿರಲಿಲ್ಲ. ಹೀಗಾಗಿ ಪ್ರಕರಣಗಳ ಮಾಲನ್ನ ಹಿಂತಿರುಗಿಸದೆ ದುರುಪಯೋಗಿಸಿಕೊಂಡಿರೋದು ಬೆಳಕಿಗೆ ಬಂದಿದೆ.
ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.