newsics.com
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸುರನ್ಕೋಟೆಯಿಂದ ಬಿಜೆಪಿ ಅಭ್ಯರ್ಥಿ ಮುಷ್ತಾಕ್ ಅಹ್ಮದ್ ಶಾ ಬುಖಾರಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮುಷ್ತಾಕ್ ಅಹ್ಮದ್ ಬುಖಾರಿ ಅವರು ಇಂದು ಪೂಂಚ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಬುಖಾರಿ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ ಮಾಧ್ಯಮ ವರದಿ ಮಾಡಿದೆ.
ಮಾಹಿತಿ ಪ್ರಕಾರ, ಬುಖಾರಿ ಅವರು ಕೆಲವು ಸಮಯದಿಂದ ಅಸ್ವಸ್ಥರಾಗಿದ್ದರು ಮತ್ತು ಇಂದು ಬೆಳಗ್ಗೆ 7 ಗಂಟೆಗೆ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗುತ್ತಿದೆ.
ಬುಖಾರಿ ಅವರು ಕಳೆದ ಫೆಬ್ರವರಿಯಲ್ಲಿ ಬಿಜೆಪಿ ಸೇರಿದ್ದರು ಮತ್ತು ಸುರನ್ಕೋಟೆಯಿಂದ ಕೇಸರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಸೆಪ್ಟೆಂಬರ್ 25 ರಂದು ಸುರನ್ಕೋಟೆ ಸೇರಿದಂತೆ 25 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.