newsics.com
ಬೆಂಗಳೂರು : ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ.
ಕೋಟಾ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಕಿಶೋರ್ ಕುಮಾರ್ ಪುತ್ತೂರ್ಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಸಹ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.