newsics.com
ಬೆಂಗಳೂರು: ನಗರದಲ್ಲಿ ತಾಪಮಾನ ಗಣನೀಯವಾಗಿ ಹೆಚ್ಚಳವಾಗಿದ್ದು, ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೋಡ ಕವಿದ ವಾತಾವರಣ, ಬಿಸಿಲಿನಿಂದಾಗಿ ನಗರದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಮಂಗಳವಾರ ನಗರದಲ್ಲಿ ಉತ್ತಮ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ದಾಟಿದೆ ಎಂದು ಹವಾಮಾನ ವರದಿ ವಿವರಿಸಿದೆ.
ಹವಾಮಾನ ಇಲಾಖೆ ಪ್ರಕಾರ, ಕಳೆದ ಒಂದು ವಾರದಿಂದ ಗರಿಷ್ಠ ಉಷ್ಣಾಂಶ ಸರಾಸರಿ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರದಲ್ಲಿ ಮುಂದಿನ ನಾಲ್ಕು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31ರಿಂದ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22ರಿಂದ 23 ಡಿಗ್ರಿ ಸೆಲ್ಸಿಯಸ್‌ನಷ್ಟಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.