newsics.com
ಕಲಬುರಗಿ: ಪತಿಯೇ ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಪ್ರಿಯಾಂಕಾ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ. ನಿಂಬರ್ಗಾ ಗ್ರಾಮದ ವಕೀಲ್ ರಾಠೋಡ್ ಜೊತೆ ಮದ್ವೆ ಮಾಡಿಕೊಡಲಾಗಿತ್ತು. ಇವರು ಮಕ್ಕಳೊಂದಿಗೆ ಶಹಬಾದ್ ರಸ್ತೆಯಲ್ಲಿನ ಇಟ್ಟಿಗೆ ಭಟ್ಟಿ ಬಳಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದರು. ಹೀಗೆ ಅದೇ ಇಟ್ಟಿಗೆ ಭಟ್ಟಿಯಲ್ಲಿ ಒಟ್ಟೊಟ್ಟಿಗೆ ಕೆಲಸ ಮಾಡ್ತಿದ್ದ ದಂಪತಿ ನಿತ್ಯವೂ ಕಂಠಪೂರ್ತಿ ಕುಡಿಯುತ್ತಿದ್ದರು. ಅದರಂತೆ ಕಳೆದ ರಾತ್ರಿ ಸಹ ಇಬ್ಬರು ಎಣ್ಣೆ ಹೊಡೆದಿದ್ದಾರೆ. ಎಣ್ಣೆ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಶುರುವಾಗಿದ್ದು, ಜಗಳ ವಿಕೋಪಕ್ಕೆ ಹೋಗಿ ಅಲ್ಲೆ ಇದ್ದ ಇಟ್ಟಿಗೆಯಿಂದ ಪತ್ನಿ ಪ್ರಿಯಾಂಕಾಳ ತಲೆಗೆ ಜಜ್ಜಿ ಹತ್ಯೆ ಮಾಡಲಾಗಿದೆ.
ಇನ್ನೂ ಮೃತದೇಹವನ್ನ ನಗರದ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಇನ್ನೂ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿಯನ್ನ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.